ನವದೆಹಲಿ: ರಾಜಕೀಯ ಪಕ್ಷಗಳು ದೇಣಿಗೆಗಳ ಸಂಗ್ರಹಕ್ಕಾಗಿ ಡಿಜಿಟಲ್ ಕ್ಯಾಂಪೇನ್ ನಡೆಸಬೇಕು ಎಂದಿರುವ ವಿತ್ತಸಚಿವ ಅರುಣ್ ಜೇಟ್ಲಿ, ಕಳೆದ ಕೆಲ ವರ್ಷಗಳಿಂದ ಚುನಾವಣೆಗೆ ಸ್ಪರ್ಧಿಸುವ ಪ್ರಕ್ರಿಯೆಗಳಲ್ಲಿ ಸಾಕಷ್ಟು ಬೆಳವಣಿಗೆಗಳಾಗಿದೆ ಎಂದು ಹೇಳಿದ್ದಾರೆ.
ದೆಹಲಿಯ ನೆಹರೂ ಮೆಮೋರಿಯಲ್ ಮ್ಯೂಸಿಯಂ ಮತ್ತು ಲೈಬ್ರೆರಿಯಲ್ಲಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆಗಳಲ್ಲಿ ಸಾಮಾಜಿಕ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದಿದ್ದಾರೆ.
ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವುದರಿಂದ ಚುನಾವಣೆಗೆ ತಗಲುವ ವೆಚ್ಚವನ್ನು ಕಡಿಮೆಗೊಳಿಸಬಹುದು ಮತ್ತು ರಾಜಕೀಯ ಪಕ್ಷಗಳು ಪ್ರಚಾರಕ್ಕೆ ಮಾಡುವ ಹಣದ ದುಂದುವೆಚ್ಚವೂ ಕಡಿಮೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವುದಕ್ಕೆ ಎಲೆಕ್ಟೋರಲ್ ಬಾಂಡ್ಸ್ಗಳನ್ನು ಹಣಕಾಸು ಪರಿಕರವನ್ನಾಗಿ ಬಳಸುವುದಕ್ಕೆ ಬೆಂಬಲ ವ್ಯಕ್ತಪಡಿಸಿದ ಅವರು, ಇದರಿಂದ ಸ್ವಚ್ಛ ಮತ್ತು ಪಾರದರ್ಶಕ ದೇಣಿಕೆ ಸಂಗ್ರಹ ಸಾಧ್ಯವಾಗಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.