ಮಂಗಳೂರು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಇದರ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಟಿಡಿ.ಎಸ್ ಮತ್ತು ಸೇವಾ ತೆರಿಗೆ ಕುರಿತು ಮಾಹಿತಿ ಕಾರ್ಯಾಗಾರ ನಡೆಯಲಿದೆ.
ಮೇ.12 ರಂದು ಮಂಗಳೂರಿನ ನಾಗುರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ಬೆಳಿಗ್ಗೆ 10-30ಕ್ಕೆ ಜೇಮ್ಸ್ ಡಿಸೋಜ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶ್ರೀ ಹರೀಶ್ ಆಚಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ. ಜಿಲ್ಲಾ ಸಹಕಾರಿ ಬ್ಯಾಂಕ್.ನಿ, ಮಂಗಳೂರು ಇದರ ಉಪಾಧ್ಯಕ್ಷ ಶ್ರೀ ವಿನಯ ಕುಮಾರ ಸೂರಿಂಜೆ, ದ.ಕ. ಜಿಲ್ಲಾ ಸಹಕಾರ ಸಂಘಗಳ ನಿಬಂಧಕ ಶ್ರೀ ಬಿ.ಕೆ.ಸಲೀಂ ಭಾಗವಹಿಸಲಿದ್ದಾರೆ.
ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾದ ಶ್ರೀ ಶಿವ ಕುಮಾರ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಲಿದ್ದು ಟಿಡಿಎಸ್ ಮತ್ತು ಸೇವಾ ತೆರಿಗೆ ಕುರಿತು ಮಾಹಿತಿ ನೀಡಲಿದ್ದಾರೆ.
ಮೇ.13 ರಂದು ಪುತ್ತೂರಿನ ಎಸ್ಸಿಡಿಸಿಸಿ ಶಾಖೆಯ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಹರೀಶ್ ಆಚಾರ್ ಅಧ್ಯಕ್ಷತೆ ವಹಿಸುವರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಲಿ.ಮಂಗಳೂರು, ಇದರ ನಿರ್ದೇಶಕರಾದ ಶ್ರೀ ಶಿವರಾಮ ರೈ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀ ರಾಜು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಉಮೇಶ್ ರಾವ್ ಟಿಡಿಎಸ್ ಮತ್ತು ಸೇವಾ ತೆರಿಗೆ ಕುರಿತು ಮಾಹಿತಿ ನೀಡಲಿದ್ದು, ಶ್ರೀ ರವೀಂದ್ರ ಪಿ. ಅವರು ಸ್ಥಿರಾಸ್ತಿಗಳ ಮೌಲ್ಯ ಮಾಪನದ ಕುರಿತು ವಿವರಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.