ಕಣ್ಣೂರು: ಕಣ್ಣೂರಿನಲ್ಲಿ ಬುಧವಾರ ರಾತ್ರಿ ಬಿಜೆಪಿ ಮುಖಂಡರೊಬ್ಬರು ಹಲ್ಲೆಗೊಳಗಾಗಿದ್ದು, ಕೇರಳದಲ್ಲಿ ಬಿಜೆಪಿ ಮುಖಂಡರ ಹತ್ಯೆ ರಾಜಕೀಯ ಮುಂದುವರಿದಿದೆ.
ಕಣ್ಣೂರು ವಿಭಾಗದ ಬಿಜೆಪಿ ಉಪಾಧ್ಯಕ್ಷ ಸುಶೀಲ್ ಎಂಬುವರೇ ಹಲ್ಲೆಗೊಳಗಾದವರು. ಹೊಟ್ಟೆ ಹಾಗೂ ಕೈಗೆ ಗಾಯಗಳಾಗಿದ್ದು, ಖೊಜಿಕೋಡೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ ಹಲ್ಲೆಕೋರರು ಮೂರು ಬೈಕ್ಗಳ ಮೂಲಕ ಬಂದಿದ್ದು, ನಂತರ ಪರಾರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಖಚಿತ ಕಾರಣ ಗೊತ್ತಾಗಿಲ್ಲ, ಆದರೆ ಹಲ್ಲೆಯ ಹಿಂದೆ ವೈಯಕ್ತಿಕ ದ್ವೇಷ ಕಾರಣ ಇರಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಘಟನೆ ಹಿಂದೆ ಸಿಪಿಐ(ಎಂ) ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದ್ದು, ಸಿಪಿಐ(ಎಂ) ಈ ಆರೋಪವನ್ನು ತಳ್ಳಿಹಾಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.