ನವದೆಹಲಿ: ಸಿಯಾಚಿನ್ನಲ್ಲಿ ನಡೆದ ಹಿಮಪಾತದಲ್ಲಿ ಮೃತರಾದ ಕರ್ನಾಟಕದ ಯೋಧ ಹನುಮಂತಪ್ಪ ಕೊಪ್ಪದ್ ಅವರ ಪತ್ನಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿಯವರು ಉದ್ಯೋಗ ನೀಡಲು ಮುಂದಾಗಿದ್ದಾರೆ.
ಕೇಂದ್ರ ಜವಳಿ ಖಾತೆ ಸಚಿವೆಯಾಗಿರುವ ಸ್ಮೃತಿ ಅವರು ಕೊಪ್ಪದ್ ಅವರ ಪತ್ನಿ ಮಹಾದೇವಿಯವರಿಗೆ ಕೇಂದ್ರ ರೇಷ್ಮೆ ಇಲಾಖೆಯಲ್ಲಿ ಉದ್ಯೋಗದ ಆಫರ್ ನೀಡಿದ್ದಾರೆ. ಇದಕ್ಕೆ ಮಹಾದೇವಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ರಾಜ್ಯ ಸರ್ಕಾರವೂ ಇವರಿಗೆ ಈ ಹಿಂದೆ ಉದ್ಯೋಗದ ಭರವಸೆ ನೀಡಿತ್ತು, ಆದರೆ ಇದುವರೆಗೂ ಭರವಸೆಯನ್ನು ಈಡೇರಿಸಿಲ್ಲ. ಇದೀಗ ಕೇಂದ್ರವೇ ಅವರಿಗೆ ಉದ್ಯೋಗ ನೀಡಲು ಮುಂದಾಗಿರುವುದು ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.
2016ರ ಫೆಬ್ರವರಿಯಲ್ಲಿ ಸಿಯಾಚಿನ್ನಲ್ಲಿ ನಡೆದ ಹಿಮಪಾತದಲ್ಲಿ ಸಿಲುಕಿ 6 ದಿನಗಳ ಕಾಲ ಜೀವಂತವಾಗಿದ್ದು, ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಹನುಮಂತಪ್ಪ ಕೊಪ್ಪದ್ ಅವರು ಮೃತರಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.