ಶ್ರೀನಗರ: ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಡೆಯುತ್ತಿರುವ ರಕ್ಷಣಾ ಪಡೆಗಳು ಮತ್ತು ಉಗ್ರರ ನಡುವಣ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಒರ್ವ ನಾಗರಿಕನೂ ಮೃತನಾಗಿದ್ದಾನೆ.
ಪೊಲೀಸರು ಮತ್ತು ಸಿಆರ್ಪಿಎಫ್ ಯೋಧರು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಪದ್ಗಂಪೋರ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ 4 ಗಂಟೆಗೆಯಿಂದ ಕಾರ್ಯಾಚರಣೆ ಆರಂಭಗೊಂಡಿದೆ. ಹತರಾದ ಇಬ್ಬರು ಉಗ್ರರು ಲಷ್ಕರ್-ಇ-ತೋಯ್ಬಾ ಸಂಘಟನೆಗೆ ಸೇರಿದ ಮೊಹಮ್ಮದ್ ಸಫಿ ಶರ್ಗುಜರಿ ಮತ್ತು ಜಹಂಗೀರ್ ಅಹ್ಮದ್ ಹನಿ ಎಂದು ಗುರುತಿಸಲಾಗಿದೆ. ಮೃತ ನಾಗರಿಕನ್ನನು ಸಮೀರ್ ವಾನಿ ಎಂದು ಗುರುತಿಸಲಾಗಿದೆ.
ಪದ್ಗಂಪೋರದಲ್ಲಿ 5-6 ಉಗ್ರರು ಅವಿತಿದ್ದಾರೆ ಎಂಬ ಮಾಹಿತಿಯ ಮೇರೆಗೆ ರಕ್ಷಣಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದು, ಇಬ್ಬರನ್ನು ಸದೆಬಡೆಯುವಲ್ಲಿ ಯಶಸ್ವಿಯಾಗಿವೆ. ಈ ವೇಳೆ ಗ್ರಾಮದ ಕೆಲವರು ರಕ್ಷಣಾ ಪಡೆಗಳ ಮೇಲೆಯೇ ಕಲ್ಲು ತೂರಾಟ ನಡೆಸಿ ಪ್ರತಿಭಟನೆ ಆರಂಭಿಸಿವೆ. ಈ ವೇಳೆ ವ್ಯಕ್ತಿ ಮೃತನಾಗಿದ್ದಾನೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.