ಬೆಂಗಳೂರು: ನಂಜನಗೂಡು, ಗುಂಡ್ಲುಪೇಟೆ ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ.
ಮುಂಬರುವ ಚುನಾವಣೆಯ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಈ ಉಪಚುನಾವಣೆಯು ಏಪ್ರಿಲ್ 9 ರಂದು ನಡೆಯಲಿದೆ. ಮಾ.14ಕ್ಕೆ ಅಧಿಸೂಚನೆ ಹೊರಬೀಳಲಿದ್ದು, ನಾಮ ಪತ್ರ ಸಲ್ಲಿಕೆಗೆ ಮಾ.21 ಕೊನೆಯ ದಿನ. 22 ರಂದು ನಾಮಪತ್ರ ಪರಿಶೀಲನೆ, ಮಾ.24 ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಏ.13 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಸಿದ್ದರಾಮಯ್ಯನವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ವಿ.ಶ್ರೀನಿವಾಸ ಪ್ರಸಾದ್ ಅವರು ಕಾಂಗ್ರೆಸ್ ಗುಡ್ಬೈ ಹೇಳಿದ ಪರಿಣಾಮ ನಂಜನಗೂಡು ಕ್ಷೇತ್ರ ತೆರವಾಗಿತ್ತು. ಇದೀಗ ಅದೇ ಶ್ರೀನಿವಾಸ ಪ್ರಸಾದ್ ಅವರೀಗ ಕಮಲ ಪಕ್ಷದಿಂದ ಕಣಕ್ಕೆ ಇಳಿಯಲಿದ್ದಾರೆ.
ಸಚಿವ ಎಚ್.ಎಸ್. ಮಹದೇವ ಪ್ರಸಾದ್ ಅವರ ಅಕಾಲಿಕ ನಿಧನದಿಂದ ತೆರವಾದ ಗುಂಡ್ಲುಪೇಟೆ ಕ್ಷೇತ್ರಕ್ಕೂ ಉಪ ಚುನಾವಣೆ ಇದೇ ಸಂದರ್ಭದಲ್ಲಿ ನಡೆಯಲಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯನವರ ತವರು ಜಿಲ್ಲೆಯಲ್ಲಿ ಉಪ ಚುನಾವಣೆ ನಡೆಯುತ್ತಿರುವುದರಿಂದ ಮಹತ್ವ ಪಡೆದುಕೊಂಡಿದೆ.
ಇದೊಂದು ರೀತಿ ನನಗೆ ಪಂಥಾಹ್ವಾನ ಇದ್ದಂತೆ ಎಂದು ಸಿ.ಎಂ.ಸಿದ್ದರಾಮಯ್ಯನವರ ವಿರುದ್ಧ ಹರಿಹಾಯ್ದಿರುವ ವಿ.ಶ್ರೀನಿವಾಸ ಪ್ರಸಾದ, ಸೋತರೆ ರಾಜಕೀಯ ಸನ್ಯಾಸ ನೀಡುವುದಾಗಿ ಹೇಳಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಗೆಲ್ಲಲು ರಣತಂತ್ರ ರೂಪಿಸುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.