ಬೆಂಗಳೂರು: ಗ್ರಾಮ ಪಂಚಾಯತ್ಗಳ ಮೊದಲ ಹಂತದ ಚುನಾವಣೆಗೆ ಸೋಮವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದೆ, ಚುನಾವಣೆ ಮೇ.29ರಂದು ನಡೆಯಲಿದ್ದು, ಒಟ್ಟು 6073 ಗ್ರಾ.ಪಂ.ಗಳ ಪೈಕಿ 5844 ಗ್ರಾ.ಪಂ.ಗಳಿಗೆ ಚುನಾವಣೆ ನಡೆಯಲಿದೆ.
ಮೊದಲ ಹಂತದ ಚುನಾವಣೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಚಾಮರಾಜನಗರ, ಮಂಡ್ಯ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಡೆಯಲಿದೆ. ಈ ಜಿಲ್ಲೆಗಳ ಗ್ರಾ.ಪಂ.ಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳು ಮೇ.18ರ ಒಳಗಾಗಿ ನಾಮಪತ್ರ ಸಲ್ಲಿಸಬೇಕಿದ್ದು, ಮೇ.19ರಂದು ಮರುಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಗೆ ಮೇ.21 ಕೊನೆಯ ದಿನವಾಗಿದೆ. ಮೇ.29ರಂದು ಮುಂಜಾನೆ 7ರಿಂದ ಸಂಜೆ 5ರ ವರೆಗೆ ಮತದಾನ ನಡೆಯಲಿದ್ದು, ಜೂ.5ರಿಂದ ಮತ ಎಣಿಕೆ ಕಾರ್ಯ ನಡೆಯಲಿದೆ.
ಎರಡನೇ ಹಂತದ ಚುನಾವಣೆ ಜೂ.2ರಂದು ನಡೆಯಲಿದ್ದು, ಇನ್ನುಳಿದ 15 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮೇ.15ರ ಒಳಗಾಗಿ ಅಧಿಸೂಚನೆ ಹೊರಡಿಸಲಿದ್ದಾರೆ. ಇಲ್ಲಿ ನಾಮಪತ್ರ ಸಲ್ಲಿಕೆಗೆ ಮೇ. 22 ಕೊನೆಯ ದಿನವಾಗಿದ್ದು, ಮೇ.23ರಂದು ಮರು ಪರಿಶೀಲನೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.