ಅಯೋಧ್ಯಾ: ರಾಜ್ಯಸಭೆಯಲ್ಲಿ ಬಿಜೆಪಿಗೆ ಬಹುಮತವಿಲ್ಲದ ಕಾರಣ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಸಂಬಂಧ ಕಾನೂನು ತರಲು ಸಾಧ್ಯವಾಗುತ್ತಿಲ್ಲ ಎಂದು ಗೃಹಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ರಾಮ ಮಂದಿರ ನಿರ್ಮಾಣದ ಭರವಸೆಯನ್ನು ಲೋಕಸಭಾ ಚುನಾವಣೆಯ ಸಂದರ್ಭ ಬಿಜೆಪಿ ನೀಡಿತ್ತು, ಪ್ರಣಾಳಿಕೆಯಲ್ಲೂ ಈ ಅಂಶವನ್ನು ಪ್ರಸ್ತಾಪಿಸಲಾಗಿತ್ತು.
ಆದರೆ ಪ್ರಸ್ತುತ ಮೇಲ್ಮನೆಯಲ್ಲಿ ಬಿಜೆಪಿಗೆ ಕೇವಲ 45 ಸದಸ್ಯಾ ಬಲವಿದೆ, ವಿರೋಧ ಪಕ್ಷಗಳಿಗೆ 132 ಸದಸ್ಯಾ ಬಲವಿದೆ. ಬಹುಮತ ಇಲ್ಲದ ವಿನಃ ರಾಮ ಮಂದಿರದ ಬಗೆಗೆ ಯಾವುದೇ ಕಾನೂನು ಅಂಗೀಕರಿಸುವುದು ಸರ್ಕಾರಕ್ಕೆ ಸಾಧ್ಯವಿಲ್ಲದ ಮಾತಾಗಿದೆ.
ಈ ಬಗ್ಗೆ ಸಮಾರಂಭವೊಂದರಲ್ಲಿ ಪ್ರತಿಕ್ರಿಯೆ ನೀಡಿದ ರಾಜನಾಥ್ ಸಿಂಗ್ ’ಬಿಜೆಪಿಗೆ ರಾಜ್ಯಸಭೆಯಲ್ಲಿ ಬಹುಮತವಿಲ್ಲ, ಹೀಗಾಗೀ ಈ ಬಾರಿ ರಾಮಂದಿರದ ಬಗೆಗೆ ಯಾವುದೇ ಮಸೂದೆ ಅಂಗೀಕರಿಸುವುದು ಸಾಧ್ಯವಿಲ್ಲ, ಮುಂದೆ ಬಹುಮತ ಪಡೆದರೆ ಖಂಡಿತವಾಗಿಯೂ ಮಸೂದೆ ಜಾರಿಗೊಳಿಸುತ್ತೇವೆ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.