ನವದೆಹಲಿ: ಪ್ರವೃತ್ತಿಗಳು ಉತ್ತರಪ್ರದೇಶದಲ್ಲಿ ಬಿಜೆಪಿಯ ಜಯವನ್ನು ಸೂಚಿಸುತ್ತಿದ್ದು, ಈ ಜಯ ರಾಜ್ಯದಲ್ಲಿ ಅಭಿವೃದ್ಧಿ ತರಲಿದೆ. ಇದು ಭ್ರಷ್ಟಾಚಾರದ ವಿರುದ್ಧ ಕೇಂದ್ರ ಸರ್ಕಾರದ ಹೋರಾಟಕ್ಕೆ ಸಾಕ್ಷಿಯಾಗಿದೆ. ಇದೊಂದು ಸುನಾಮಿ ಇದ್ದಂತೆ, ಜನರು ಅಭಿವೃದ್ಧಿಯನ್ನು ಬಯಸಿ ಮತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಈ ಜಯ ಉತ್ತರ ಪ್ರದೇಶದ ಬದಲಾವಣೆ, ಸಮಾಜವನ್ನು ಬಲಪಡಿಸಲು ಹಾಗೂ ಸಮಾಜದ ಎಲ್ಲ ವರ್ಗಗಳ ಜೊತೆ ಸೇರುವ ಉದ್ದೇಶಕ್ಕಾಗಿ ಆಗಿದೆ. ಇದು ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯ ಬದಲಾವಣೆ, ಅಭಿವೃದ್ಧಿಯ ವಿರುದ್ಧದ ಭಷ್ಟ್ರಾಚಾರ ಮತ್ತು ಇತರ ಅಂಶಗಳ ವಿರುದ್ಧದ ಜಯವಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನನಗೆ ಹೆಮ್ಮೆ ಇದೆ. ಬಿಜೆಪಿ ಮತ್ತು ಮೋದಿ ಅವರ ಮೇಲೆ ನಂಬಿಕೆ ಇಟ್ಟಿರುವ ಜನರಿಗೆ ಧನ್ಯವಾದ ಹೇಳುತ್ತೇನೆ. ಈ ಜಯಕ್ಕಾಗಿ ಶ್ರಮಿಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಇತರ ಕಾರ್ಯರ್ಕರಿಗೆ ಅಭಿನಂದನೆಗಳು ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.