ನವದೆಹಲಿ: ಒಂದು ಗಮನಾರ್ಹ ಬದಲಾವಣೆಯಂತೆ ಉತ್ತರಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ೩೦೦ ಸ್ಥಾನಗಳನ್ನು ಗೆಲ್ಲುವ ಮೂಲಕ ೧೪ ವರ್ಷಗಳ ನಂತರ ಅಧಿಕಾರಕ್ಕೆ ಮರಳುವ ಸಿದ್ಧತೆ ನಡೆಸುತ್ತಿದೆ.
ಈ ಸಂದರ್ಭ ಸುದ್ದಿಗೋಷ್ಠಿಯಲಲ್ಲಿ ಮಾತನಾಡುತ್ತಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು, ಈ ಫಲಿತಾಂಶ ಬಿಜೆಪಿಗೆ ಪ್ರೋತ್ಸಾಹಕರವಾಗಿದೆ. ನಾವು ನಾಲ್ಕು ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ ಮತ್ತು ಮಣಿಪುರಗಳಲ್ಲಿ ಸರ್ಕಾರ ರಚಿಸಲಿದ್ದೇವೆ ಎಂದು ಹೇಳಿದ್ದಾರೆ.
ಉತ್ತರಪ್ರದೇಶದಲ್ಲಿ ಬಿಜೆಪಿ 403ರಲ್ಲಿ 310 ಸ್ಥಾನಗಳನ್ನು ಗೆಲ್ಲಲಿದೆ. ಉಳಿದ 100 ಸ್ಥಾನಗಳು ಇತರ ಪಕ್ಷಗಳ ನಡುವೆ ಹಂಚಿಕೆಯಾಗಲಿದೆ. ಪಕ್ಷ ಉತ್ತರಾಖಂಡ್ನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿದೆ. ಗೋವಾದಲ್ಲೂ ಉತ್ತಮ ಮತ ಹಂಚಿಕೆಯಾಗಿದೆ. ಈ ಜಯ ಸಂಪೂರ್ಣವಾಗಿ ಪ್ರಧಾನಿ ಮೋದಿ ಅವರಿಗೆ ಸಲ್ಲುತ್ತದೆ. ಪ್ರದಾನಿ ಮೋದಿ ಅವರು ಸ್ವತಂತ್ರ ಭಾರತದ ಅತ್ಯಂತ ಜನಪ್ರಿಯ ನಾಯಕರಾಗಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.
ಜನರು ಉತ್ತಮ ನಿರ್ವಹಣೆಯ ರಾಜಕೀಯವನ್ನು ಒಪ್ಪಿಕೊಂಡಿದ್ದಾರೆ. ಈ ಐತಿಹಾಸಿಕ ಬದಲಾವಣೆ ದೇಶವನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯಲಿದೆ. ಬಿಜೆಪಿ ದೇಶದ ಮತದಾರರ ನಿರೀಕ್ಷೆಗಳನ್ನು ಈಡೇರಿಸುವ ಭರವಸೆ ನೀಡುತ್ತದೆ ಎಂದು ಅಮಿತ್ ಶಾ ಅವರು ಈ ವೇಳೆ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.