ಜಲಂಧರ್: ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಮಹಾತ್ಮ ಗಾಂಧೀಜಿ ಅವರ ಮೊಮ್ಮಗ ತುಷಾರ್ ಗಾಂಧಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇವರ ವಿರುದ್ಧ ಐಪಿಸಿ ಸೆಕ್ಷನ್ 295ಎ(ಉದ್ದೇಶಪೂರ್ವಕ ಮತ್ತು ದುರುದ್ದೇಶದಿಂದ ಕೂಡಿದ ವರ್ತನೆ, ಯಾವುದೇ ವರ್ಗದ ಧಾರ್ಮಿಕ ಭಾವನೆ ಕೆರಳಿಸುವ ಹುನ್ನಾರ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
‘ಜನ್ ಜಾಗೃತಿ ಮಂಚ್’ ಎನ್ಜಿಒ ಮುಖಂಡರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಜಲಂಧರ್ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಜೈಪುರ್ನಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿದ್ದ ತುಷಾರ್ ಗಾಂಧಿ ‘ಭಗತ್ ಸಿಂಗ್ ಬ್ರಿಟಿಷ್ ಆಡಳಿತದ ತಪ್ಪಿತಸ್ಥ, ಹೀಗಾಗೀ ಅವರ ಮರಣದಂಡನೆ ಶಿಕ್ಷೆಯನ್ನು ಅಮಾನತುಪಡಿಸುವಂತೆ ಗಾಂಧೀಜಿ ಮನವಿ ಮಾಡಿರಲಿಲ್ಲ’ ಎಂದಿದ್ದರು.
ಅವರ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೇ ಭಗತ್ ಸಿಂಗ್ ಅಭಿಮಾನಿಗಳಲ್ಲಿ ಆಕ್ರೋಶ ಮೂಡಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.