ನವದೆಹಲಿ: ಈ ಬಾರಿಯ ಉತ್ತರಪ್ರದೇಶ ಚುನಾವಣೆಯಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಜನ ಪ್ರತಿನಿಧಿಗಳು ವಿಧಾನಸಭೆಗೆ ಆಯ್ಕೆಗೊಂಡಿದ್ದಾರೆ. ಈ ಸಕಾರಾತ್ಮಕ ಬೆಳವಣಿಗೆಗೆ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.
‘ಈ ಬಾರಿಯ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಆಯ್ಕೆಗೊಂಡು ನೂತನ ದಾಖಲೆಯನ್ನು ಬರೆದಿರುವುದಕ್ಕೆ ಸಂತಸವಾಗುತ್ತದೆ’ ಎಂದು ಟ್ವಿಟರ್ನಲ್ಲಿ ಮೋದಿ ಹೇಳಿಕೊಂಡಿದ್ದಾರೆ.
ಈ ಬಾರಿ ಒಟ್ಟು 38 ಮಹಿಳೆಯರು ಶಾಸಕರಾಗಿ ಯುಪಿ ವಿಧಾನಸಭೆಗೆ ಆಯ್ಕೆಗೊಂಡಿದ್ದಾರೆ. ಸ್ವತಂತ್ರ ಬಂದ ಬಳಿಕ ಇಷ್ಟು ಸಂಖ್ಯೆಯಲ್ಲಿ ಯುಪಿಯಲ್ಲಿ ಮಹಿಳೆಯರು ಆಯ್ಕೆಗೊಂಡಿರುವುದು ಇದೇ ಮೊದಲು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.