ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಭಾರೀ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ಜಯ ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ.
ನ್ಯಾಯಾಧೀಶ ಸಿಆರ್ ಕುಮಾರಸ್ವಾಮಿ ತೀರ್ಪು ಪ್ರಕಟಿಸಿದ್ದು, 18 ವರ್ಷ ಹಳೆಯ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಯಾ ಮತ್ತು ಇತರ ಮೂವರು ಆರೋಪಿಗಳಾದ ಶಶಿಕಲಾ, ಇಳವರಸಿ ಮತ್ತು ಸುಧಾಕರನ್ ಅವರು ನಿದೋರ್ಷಿಗಳು ಎಂದು ಹೇಳಿದ್ದಾರೆ.
ಈ ತೀರ್ಪಿನ ಹಿನ್ನಲೆಯಲ್ಲಿ ಎಡಿಎಂಕೆ ಪಾಳಯದಲ್ಲಿ ಹರ್ಷ ಮನೆ ಮಾಡಿದೆ, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.
ಈ ತೀರ್ಪಿನಿಂದಾಗಿ ಜಯಲಲಿತಾ ಅವರು ಇನ್ನು ಸಕ್ರಿಯ ರಾಜಕಾರಣಕ್ಕೆ ಮರಳಬಹುದು, ಅಲ್ಲದೇ ಮುಖ್ಯಮಂತ್ರಿಯಾಗಿ ಮತ್ತೆ ಅಧಿಕಾರದ ಗದ್ದುಗೆಯನ್ನು ಏರಬಹುದು.
2014ರ ಸೆಪ್ಟಂಬರ್ನಲ್ಲಿ ಸೆಷನ್ಸ್ ನ್ಯಾಯಾಲಯ ಜಯಾ ಅವರು ಅಪರಾಧಿ ಎಂದು ತೀರ್ಪು ನೀಡಿ 4 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು, ಇದನ್ನು ಪ್ರಶ್ನಿಸಿ ಜಯಾ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.