ಪಣಜಿ: ಪ್ರಾದೇಶಿಕ ಪಕ್ಷಗಳ ಮತ್ತು ಸ್ವತಂತ್ರ ಶಾಸಕರ ಬೆಂಬಲದೊಂದಿಗೆ ಗೋವಾ ಮುಖ್ಯಮಂತ್ರಿಯಾಗಿ ಮಂಗಳವಾರ ಪ್ರಮಾಣವಚನ ಸ್ವೀಕರಿಸಲು ಮನೋಹರ್ ಪರಿಕ್ಕರ್ ಅವರು ಸನ್ನದ್ಧರಾಗಿದ್ದಾರೆ. ಆದರೆ ಇವರ ಪ್ರಮಾಣವಚನವನ್ನು ಪ್ರಶ್ನಿಸಿ ಕಾಂಗ್ರೆಸ್ ಕೋರ್ಟ್ ಮೆಟ್ಟಿಲೇರಿದೆ.
ಗೋವಾದಲ್ಲಿ 17 ಸ್ಥಾನಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಏಕೈಕ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ 13 ಸ್ಥಾನಗಳನ್ನು ಗಳಿಸಿದ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿರುವುದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೇ ಬಿಜೆಪಿಗೆ ಅವಕಾಶಕೊಟ್ಟ ರಾಜ್ಯಪಾಲ ಮೃದುಲಾ ಸಿನ್ಹಾ ಅವರ ವಿರುದ್ಧ ಹರಿಹಾಯ್ದಿದೆ.
ಎರಡನೇ ಸ್ಥಾನ ಬಂದ ಪಕ್ಷಕ್ಕೆ ಸರ್ಕಾರ ರಚಿಸುವ ಹಕ್ಕಿಲ್ಲ ಎಂದಿರುವ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ, ಮಣಿಪುರ ಮತ್ತು ಗೋವಾದಲ್ಲಿ ಚುನಾವಣೆಯನ್ನು ಬಿಜೆಪಿ ಕದ್ದಿದೆ ಎಂದಿದ್ದಾರೆ.
ಇದೀಗ ಕಾಂಗ್ರೆಸ್ ರಾಜ್ಯಪಾಲರನ್ನು ಭೇಟಿಯಾಗಿ ತನಗೆ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡುವಂತೆ ಕೋರುವ ಸಾಧ್ಯತೆ ಇದೆ. 3 ಸ್ಥಾನಗಳನ್ನು ಪಡೆದಿರುವ ಗೋವಾ ಫಾರ್ವರ್ಡ್ ಪಕ್ಷದಿಂದ ಬೆಂಬಲ ಪಡೆಯುವ ಪ್ರಯತ್ನದಲ್ಲಿ ಅದು ಇದೆ.
ಕಾಂಗ್ರೆಸ್ ನಾಯಕ ಚಂದ್ರಕಾಂತ್ ಕವ್ಲೇಕರ್ ಅವರು ಪರಿಕ್ಕರ್ಗೆ ಸರ್ಕಾರ ರಚನೆಯ ಅವಕಾಶವನ್ನು ನೀಡಿರುವ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ, ಇದರ ವಿಚಾರಣೆ ಶೀಘ್ರದಲ್ಲೇ ನಡೆಯುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.