ಪಣಜಿ: ಕೇಂದ್ರ ಮಾಜಿ ರಕ್ಷಣಾ ಸಚಿವ ಹಾಗೂ ಬಿಜೆಪಿ ಸಚಿವ ಮನೋಹರ್ ಪರಿಕ್ಕರ್ ಅವರು ನಾಲ್ಕನೇ ಬಾರಿ ಗೋವಾ ಮುಖ್ಯಮಂತ್ರಿಯಾಗಿ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಪರಿಕರ್ ಅವರಿಗೆ ಗವರ್ನರ್ ಮೃದುಲಾ ಸಿನ್ಹಾ ಪ್ರಮಾಣವಚನ ಬೋಧಿಸಿದ್ದು, ಗೋವಾದ 13ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಪರಿಕ್ಕರ್ ಅವರ ಜೊತೆ ಬಿಜೆಪಿಯ ಐವರು ಶಾಸಕರು, ಗೋವಾ ಸರ್ಕಾರಕ್ಕೆ ಬೆಂಬಲಿಸುವ ಮಹಾರಾಷ್ಟ್ರ ಗೋಮಾಂತಕ ಪಕ್ಷದ 6 ಮಂದಿ ಶಾಸಕರು ಸೇರಿ 11 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೊತೆಗೆ ಓರ್ವ ಸ್ವತಂತ್ರ ಪಕ್ಷದ ಶಾಸಕನೂ ಪ್ರಮಾಣ ಸ್ವೀಕರಿಸಿದ್ದಾರೆ.
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಸಚಿವರಾದ ನಿತಿನ್ ಗಡ್ಕರಿ, ವೆಂಕಯ್ಯ ನಾಯ್ಡು, ಇತರ ಗಣ್ಯರು ಉಪಸ್ಥಿತರಿದ್ದರು.
ಮನೋಹರ್ ಪರಿಕ್ಕರ್ ಅವರು ಸೋಮವಾರ ಕೇಂದ್ರ ರಕ್ಷಣಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.