ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಭಾರತಕ್ಕೆ ಕರೆ ತರುತ್ತೇವೆ ಎಂಬ ಭರವಸೆಯನ್ನು ಗೃಹಸಚಿವ ರಾಜನಾಥ್ ಸಿಂಗ್ ಅವರು ನೀಡಿದ್ದಾರೆ.
ವಿರೋಧ ಪಕ್ಷಗಳ ತೀವ್ರ ಒತ್ತಡದ ಹಿನ್ನಲೆಯಲ್ಲಿ ಸೋಮವಾರ ಲೋಕಸಭೆಯಲ್ಲಿ ಹೇಳಿಕೆ ನೀಡಿದ ಅವರು ‘ದಾವೂದ್ ಪಾಕಿಸ್ಥಾನದಲ್ಲಿ ಇದ್ದಾನೆ ಎಂಬ ಬಗ್ಗೆ ನಮ್ಮಲ್ಲಿ ನಿಖರ ಮಾಹಿತಿ ಇದೆ. ಪಾಕಿಸ್ಥಾನದ ಮೇಲೆ ಒತ್ತಡ ಹೇರಿ ಆತನನ್ನು ಭಾರತಕ್ಕೆ ಕರೆ ತರುವ ಪ್ರಯತ್ನವನ್ನು ನಿರಂತರವಾಗಿ ಮಾಡಲಿದ್ದೇವೆ’ ಎಂದಿದ್ದಾರೆ.
ಇತ್ತೀಚಿಗೆ ಗೃಹಖಾತೆ ರಾಜ್ಯಸಚಿವ ಹರಿಭಾಯ್ ಪಾರ್ಥಿಭಾಯ್ ಅವರು, ದಾವೂದ್ ಎಲ್ಲಿದ್ದಾನೆಂದು ಗೊತ್ತಿಲ್ಲ, ಗೊತ್ತಾದ ಕೂಡಲೇ ಹಿಡಿಯುವ ಪ್ರಯತ್ನ ಮಾಡುತ್ತೇವೆ ಎಂದು ಸದನದಲ್ಲಿ ಹೇಳಿದ್ದರು.
ಆದರೆ ಸಂಸತ್ತಿನ ಹೊರಗಡೆ ಸಚಿವ ಕಿರನ್ ರಿಜ್ಜು ಅವರು ದಾವೂದ್ ಪಾಕಿಸ್ಥಾನದಲ್ಲೇ ಇದ್ದಾನೆ ಎಂಬ ಹೇಳಿಕೆ ನೀಡಿದ್ದರು. ಈ ಗೊಂದಲಮಯ ಹೇಳಿಕೆಯ ವಿರುದ್ಧ ಪ್ರತಿಪಕ್ಷಗಳು ಕೆಂಡಕಾರಿದ್ದವು. ಅಲ್ಲದೇ ಸಂಸತ್ತಿನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.