ಚಂಡೀಗಢ: ಪಂಜಾಬ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ನ ಅಮರೀಂದರ್ ಸಿಂಗ್ ಅವರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ನೂತನ ಸಿಎಂರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಚಂಡೀಗಢದಲ್ಲಿನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಿಪಿ ಸಿಂಗ್ ಬದ್ನೋರ್ ಅವರು ಅಮರೀಂದರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಈ ವೇಳೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಉಪಸ್ಥಿತರಿದ್ದರು.
ಟ್ವಿಟರ್ ಮೂಲಕ ಅಮರೀಂದರ್ಗೆ ಅಭಿನಂದಿಸಿರುವ ಮೋದಿ, ಪಂಜಾಬ್ನ ಅಭಿವೃದ್ಧಿ ಕಾರ್ಯ ಮಾಡಲು ಆಲ್ ದಿ ಬೆಸ್ಟ್ ಎಂದಿದ್ದಾರೆ.
ಪಂಜಾಬ್ನ 26ನೇ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಅಮರೀಂದರ್ ಅವರೊಂದಿಗೆ ನವಜೋತ್ ಸಿಂಗ್ ಸಿಧು ಮತ್ತು ಮನ್ಪ್ರೀತ್ ಬಾದಲ್ ಅವರೂ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.