ನವದೆಹಲಿ: ಭಾರತದಲ್ಲಿ ಪ್ರತಿ ವರ್ಷ ಮಾರ್ಚ್ 16ರಂದು ರಾಷ್ಟ್ರೀಯ ಲಸಿಕಾ ದಿನವನ್ನು ಆಯೋಜಿಸಲಾಗುತ್ತದೆ. ಮೊದಲ ಬಾರಿ ಮಾ.16, 1995ರಂದು ಪೋಲಿಯೋ ಲಸಿಕೆ ನೀಡುವ ಮೂಲಕ ರಾಷ್ಟ್ರೀಯ ಲಿಸಿಕಾ ದಿನವನ್ನು ಆರಂಭಿಸಲಾಗಿತ್ತು.
ಕೇಂದ್ರ ಸರ್ಕಾರ ಲಸಿಕೆಯಿಂದ ತಡೆಗಟ್ಟಬಹುದಾದ 11 ರೋಗಗಳಿಗೆ ಉಚಿತ ಲಸಿಕೆ ಒದಗಿಸುತ್ತಿದೆ.
ರಾಷ್ಟ್ರೀಯ ಆರೋಗ್ಯ ನೀತಿ, 2017 ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳುತ್ತಿದ್ದೇನೆ. ಇದು ರೋಗ ತಡೆಗಟ್ಟುವಿಕೆ ಮತ್ತು ಆರೋಗ್ಯ ದೃಷ್ಟಿಕೋನ ಹೊಂದಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರು ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸರ್ಕಾರ 14 ವರ್ಷಗಳ ನಂತರ ರಾಷ್ಟ್ರೀಯ ಆರೋಗ್ಯ ನೀತಿ, 2017ಕ್ಕೆ ಅನುಮೋದನೆ ನೀಡಿದೆ. ಇದು ರೋಗಗಳ ಪ್ರಸ್ತುತ ಮತ್ತು ಹಾಲಿ ಸಮಸ್ಯೆಗಳನ್ನು ಪರಿಹರಿಸಲು ಜಾರಿಗೆ ಬಂದಿದೆ ಎಂದು ನಡ್ಡಾ ಟ್ವೀಟ್ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.