ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಗೋವಿಂದ ರಾಜು ಅವರ ಡೈರಿಗೆ ಸಂಬಂಧಿಸಿದ ಚರ್ಚೆಗೆ ಅವಕಾಶ ನೀಡದೇ, ಸ್ಪೀಕರ್ ಕೆ.ಬಿ.ಕೋಳಿವಾಡ್ ಅವರು ಸರ್ಕಾರದ ಒತ್ತಡಕ್ಕೆ ಮಣಿದರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭೆ ವಿಪಕ್ಷ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೈರಿ ಕುರಿತ ಚರ್ಚೆಗೆ ಮೊದಲು ಲಿಖಿತ ಅವಕಾಶ ಕೊಟ್ಟಿದ್ದ ಸ್ಪೀಕರ್, ನಂತರ ಕಾನೂನು ಸಚಿವರು ಎತ್ತಿದ ಕ್ರಿಯಾಲೋಪವನ್ನು ಎತ್ತಿ ಹಿಡಿದರು. ಒಮ್ಮೆ ನಿಯಮ-69 ಅಡಿ ಚರ್ಚೆಗೆ ಅವಕಾಶ ನೀಡುತ್ತೇನೆ ಎಂದಿದ್ದವರು ನಂತರ ನೀಡದಿದ್ದಾಗ ನಮ್ಮ ಹಕ್ಕು ಮೊಟಕುಗೊಂಡಂತಾಯಿತು. ಅದಕ್ಕಾಗಿ ಬಿಜೆಪಿ ಧರಣಿಗೆ ಮುಂದಾಗಬೇಕಾಯಿತು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ಗೆ ನೀಡಿರುವ ಕಪ್ಪ ಕಾಣಿಕೆಗೆ ಸಂಬಂಧಿಸಿದಂತೆ ಜನಸಾಮಾನ್ಯರಿಗೆ ಕುತೂಹಲವಿದೆ ಎಂದ ಜಗದೀಶ ಶೆಟ್ಟರ್, ಈ ಕುರಿತು ಚರ್ಚೆಗೆ ಅವಕಾಶ ನೀಡದಿರುವುದು ಖಂಡನೀಯ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.