ಹುಬ್ಬಳ್ಳಿ: ಒಂದು ಧರ್ಮದವರಿಗೆ ಗೌರವ ಧನ ನೀಡುವ ಮೂಲಕ ರಾಜ್ಯ ಸರ್ಕಾರ ಓಲೈಕೆಯ ಹಾಗೂ ಪಕ್ಷಪಾತತನದ ರಾಜಕಾರಣ ಮಾಡುತ್ತಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದರು.
ಈ ಕುರಿತು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ದೇವಾಲಯಗಳ ಮೇಲೆ ಸರ್ಕಾರ ಕಣ್ಣಿಟ್ಟಿದೆ. ತಾರತಮ್ಯ ನೀತಿಯಿಂದ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಕಾರ್ಯಕ್ಕೆ ಸರ್ಕಾರ ಮುಂದಾಗಿರುವುದು ಸಹನೀಯವಲ್ಲ ಎಂದರು.
ಗೋವಿಂದ ರಾಜು ಹಾಗೂ ಲೇಹರ್ ಸಿಂಗ್ ಡೈರಿ ಪ್ರಕರಣದ ಕುರಿತು ಜನರಲ್ಲಿ ಕುತೂಹಲವಿದೆ. ಕಾರಣ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಿ, ಆಗ ನಿಜ ಏನೆಂಬುದು ಗೊತ್ತಾಗಲಿದೆ ಎಂದು ಶೆಟ್ಟರ್ ಹೇಳಿದರು.
ರೈತರ ಕಾಳಜಿಯೇ ಇಲ್ಲದ ಬಜೆಟ್ ನೀರಸವಾಗಿತ್ತು. ಬಹುನಿರೀಕ್ಷಿತ ರೈತರ ಸಾಲವನ್ನೂ ಸಿದ್ದರಾಮಯ್ಯನವರ ಸರ್ಕಾರ ಮನ್ನಾ ಮಾಡಿಲ್ಲ. ಬರ ಪರಿಸ್ಥಿತಿಯಲ್ಲಿ ಸಿಕ್ಕು ನರಳುತ್ತಿರುವ ರೈತರು ಹಿಡಿಶಾಪ ಹಾಕುತ್ತಿದ್ದಾರೆ. ಇವೆಲ್ಲ ಅಂಶಗಳನ್ನು ಇಟ್ಟುಕೊಂಡು ವಿಧಾನ ಸಭೆಯಲ್ಲಿ ಪ್ರಶ್ನಿಸಲಾಗುವುದು ಎಂದು ಅವರು ಹೇಳಿದರು.
ಶಾಸಕ ಅರವಿಂದ ಬೆಲ್ಲದ, ಮಹಾನಗರ ಪಾಲಿಕೆ ಸದಸ್ಯ ಸುಧೀರ ಸರಾಫ್ ಹಾಗೂ ಇತರರು ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.