ಬೆಂಗಳೂರು: ಬಹುಕುತೂಹಲ ಕೆರಳಿಸಿದ್ದ ಪಂಚರಾಜ್ಯಗಳ ಚುನಾವಣೆಯಲ್ಲಿ ಕಮಲ ಅರಳಿದೆ. ಇದೀಗ ರಾಜ್ಯದಲ್ಲಿ ಏ.9 ರಂದು ನಡೆಯಲಿರುವ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.
ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಅವರು ನಂಜನಗೂಡು ಉಪ ಚುನಾವಣಕ್ಕೆ ಸ್ಪರ್ಧಿಸಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಬೆಂಬಲಿಗರು ಕೇಶವಮೂರ್ತಿ ಅವರಿಗೆ ಸಾಥ್ ನೀಡಿದರು.
ಇನ್ನೊಂದೆಡೆ ಗುಂಡ್ಲುಪೇಟೆ ಕ್ಷೇತ್ರದಲ್ಲಿ ಬಿಜೆಪಿಯ ನಿರಂಜನ್ಕುಮಾರ ಅವರು ನಾಮಪತ್ರ ಸಲ್ಲಿಸಿದರು. ಮಾಜಿ ಸಚಿವ ಶ್ರೀರಾಮುಲು, ಬಿಜೆಪಿಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಇದ್ದರು. ಸಾವಿರಾರು ಅಭಿಮಾನಿಗಳು ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮೆರವಣಿಗೆ ಮೂಲಕ ನಿರಂಜನಕುಮಾರ್ ಅವರಿಗೆ ಸಾಥ್ ನೀಡಿದರು.
ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ಹೇಳಿದೆ. ಪರಿಣಾಮ ಇಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ನೇರ ಸ್ಪರ್ಧೆ ಇದ್ದು, ಬಹು ಕುತೂಹಲ ಮೂಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.