ನವದೆಹಲಿ: ಉತ್ತರಪ್ರದೇಶದ 21ನೇ ಮುಖ್ಯಮಂತ್ರಿಯಾದ ಬಳಿಕ ಯೋಗಿ ಆದಿತ್ಯನಾಥ್ ಅವರು ಮೊದಲ ಹೆಜ್ಜೆಯಂತೆ ಸಚಿವರು ತಮ್ಮ ಕಾರುಗಳಿಗೆ ಸಾಂಕೇತಿಕವಾದ ಕೆಂಪು ಲೈಟ್ ಬಳಸುವಂತಿಲ್ಲ ಎಂದು ಆದೇಶಿಸಿದ್ದಾರೆ.
ರಾಜ್ಯ ಪೊಲೀಸ್ ಡಿಜಿಪಿ ಜೊತೆ ಮಾತುಕತೆ ನಡೆಸಿದ ಅವರು, ರಾಜ್ಯದಲ್ಲಿ ಆತಂಕ ಹುಟ್ಟಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.
ಇದು ಅವರು ಮುಖ್ಯಮಂತ್ರಿಯಾದ ಬಳಿಕ ಹೊರಡಿಸಿದ ಮೊದಲ ಅತಿ ದೊಡ್ಡ ಆದೇಶವಾಗಿದ್ದು, ಇದರಿಂದ ವಿವಿಐಪಿ ಪದ್ಧತಿಗೆ ತಡೆ ಬೀಳಲಿದೆ ಎನ್ನಲಾಗಿದೆ.
ಅಲ್ಲದೇ ರಾಜ್ಯದ ಸರ್ಕಾರಿ ಅಧಿಕಾರಿಗಳು ತಮ್ಮ ಸ್ಥಿರ ಮತ್ತು ಚರ ಆಸ್ತಿಗಳು, ಆದಾಯ ತೆರಿಗೆ ದಾಖಲೆಗಳನ್ನು ಸಲ್ಲಿಸುವಂತೆ ಆದೇಶಿಸಿದ್ದಾರೆ.
ಲೋಕ ಭವನದಲ್ಲಿ ಹಿರಿಯ ಧಿಕಾರ ಜೊತೆಗಿನ ಸಭೆಯಲ್ಲಿ ಅವರು ಈ ಆದೇಶ ಹೊರಡಿಸಿದ್ದು, ಅಧಿಕಾರಿಗಳು ಬಿಜೆಪಿಯ ‘ಸಂಕಲ್ಪ ಪತ್ರ’ವನ್ನು ಓದಿ ಅದನ್ನು ಕಾರ್ಯಗತಗೊಳಿಸುವಂತೆ ಸೂಚಿಸಿದ್ದಾರೆ.
ಯೋಗಿ ಆದಿತ್ಯನಾಥ್ ಅವರು ಪ್ರಸ್ತುತ ನಿವಾಸದಿಂದ ಯುಪಿಯ 5 ಕಾಲಿದಾಸ್ ಮಾರ್ಗ್ನ ಸಿಎಂ ಅವರ ಅಧಿಕೃತ ನಿವಾಸಕ್ಕೆ ಸ್ಥಳಾಂತರಗೊಳ್ಳಲಿದ್ದಾರೆ.
ಯೋಗಿ ಆದಿತ್ಯನಾಥ್ ಅವರು ಭಾನುವಾರ ಯುಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.