ನವದೆಹಲಿ: ಭಾರತದಲ್ಲಿ 23 ನಕಲಿ ವಿಶ್ವವಿದ್ಯಾನಿಲಯಗಳು ಮತ್ತು 279 ನಕಲಿ ತಾಂತ್ರಿಕ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂಬ ಆಘಾತಕಾರಿ ಮಾಹಿತಿಯನ್ನು ವರದಿಯೊಂದು ಬಹಿರಂಗಪಡಿಸಿದೆ.
ಯೂನಿವರ್ಸಿಟಿ ಗ್ರಾಂಟ್ ಕಮಿಷನ್(ಯುಜಿಸಿ) ಮತ್ತು ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್(ಎಐಸಿಟಿಇ) ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ನಕಲಿ ವಿಶ್ವವಿದ್ಯಾಲಯ ಮತ್ತು ನಕಲಿ ತಾಂತ್ರಿಕ ಸಂಸ್ಥೆಗಳ ಪಟ್ಟಿಯನ್ನು ಮಾಡಿದೆ.
23 ನಕಲಿ ವಿಶ್ವವಿದ್ಯಾನಿಲಯಗಳ ಪೈಕಿ ಉತ್ತರಪ್ರದೇಶದಲ್ಲಿ 9 ಮತ್ತು ದೆಹಲಿಯಲ್ಲಿ 7 ನಕಲಿ ವಿಶ್ವವಿದ್ಯಾನಿಲಯಗಳಿವೆ. ಯುಜಿಸಿಯ ಅನುಮತಿ ಇಲ್ಲದೆಯೇ ಇವುಗಳು ಕಾರ್ಯನಿರ್ವಹಿಸುತ್ತಿವೆ.
ಎಂಜಿನಿಯರಿಂಗ್ ಸೇರಿದಂತೆ ಇತರ ತಾಂತ್ರಿಕ ಕೋರ್ಸುಗಳನ್ನು ನೀಡುತ್ತಿರುವ ೬೬ ನಕಲಿ ಕಾಲೇಜುಗಳು ದೆಹಲಿಯಲ್ಲಿವೆ. ಯುಪಿ. ತೆಲಂಗಾಣ, ಪಶ್ಚಿಮಬಂಗಾಳ, ಮಹಾರಾಷ್ಟ್ರ ಸೇರಿದಂತೆ ಇಡೀ ದೇಶದಲ್ಲಿ 279 ನಕಲಿ ತಾಂತ್ರಿಕ ಸಂಸ್ಥೆಗಳಿವೆ. ಇವುಗಳಿಗೆ ಪದವಿ ನೀಡುವ ಯಾವುದೇ ಅಧಿಕಾರವಿಲ್ಲ.
ಇಂತಹ ನಕಲಿ ಸಂಸ್ಥೆಗಳಿಗೆ ವಿದ್ಯಾರ್ಥಿಗಳ ಬಗ್ಗೆ ವಿದ್ಯಾರ್ಥಿಗಳು ಎಚ್ಚರವಹಿಸಬೇಕಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.