ನವದೆಹಲಿ: ಪಾಕಿಸ್ಥಾನಕ್ಕೆ ಮದುವೆ ಮಾಡಿಕೊಟ್ಟ ಭಾರತೀಯ ಮಹಿಳೆಯೊಬ್ಬಳಿಗೆ ಅತ್ತೆ ಮಾವಂದಿರು ಕಿರುಕುಳ ನೀಡುತ್ತಿದ್ದಾರೆ ಎಂಬ ಸುದ್ದಿ ತಿಳಿದ ತಕ್ಷಣ ಆಕೆಯ ನೆರೆವಿಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಧಾವಿಸಿದ್ದಾರೆ.
ಇಸ್ಲಾಮಾಬಾದ್ನಲ್ಲಿನ ಭಾರತೀಯ ಹೈಕಮಿಷನ್ ಜೊತೆ ಅವರು ವಿಷಯ ಪ್ರಸ್ತಾಪ ಮಾಡಿದ್ದಾರೆ. ಇದೀಗ ಹೈಕಮಿಷನ್ ಮಹಿಳೆಯನ್ನು ಸಂಪರ್ಕಿಸಿದ್ದು, ಆಕೆಯ ಸುರಕ್ಷತೆ ಮತ್ತು ಭಾರತ ವಾಪಾಸ್ಸಾತಿಗೆ ಬೇಕಾದ ವ್ಯವಸ್ಥೆ ಮಾಡಿಕೊಟ್ಟಿದೆ.
ಹೈದರಾಬಾದ್ನ ಮೊಹಮ್ಮದಿಯ ಬೇಗಂ ಅವರನ್ನು ಪಾಕಿಸ್ಥಾನಕ್ಕೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಅಲ್ಲಿ ಪತಿಯ ಮನೆಯವರಿಂದ ಅವರು ವಿಪರೀತ ಕಿರುಕುಳ ಅನುಭವಿಸಿದರು. ಆಕೆಯ ಪತಿ ದೈಹಿಕ ಹಲ್ಲೆ ನಡೆಸಿದ್ದು ಮಾತ್ರವಲ್ಲದೇ ರೂಂನಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡುತ್ತಿದ್ದ ಎನ್ನಲಾಗಿದೆ.
ಹೀಗಾಗೀ ಮಹಿಳೆಯ ತಂದೆ ಸುಷ್ಮಾ ಸ್ವರಾಜ್ ಅವರಿಗೆ ಯೂಟ್ಯೂಬ್ನಲ್ಲಿ ಸಂದೇಶ ರವಾನಿಸಿ ಸಹಾಯಕ್ಕಾಗಿ ಅಂಗಲಾಚಿದರು.
ಇದೀಗ ಮಹಿಳೆಯು ಹೈಕಮಿಷನ್ ಅಧಿಕಾರಿಗಳೊಂದಿಗೆ ಭಾರತಕ್ಕೆ ವಾಪಾಸ್ಸಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆಕೆಯ ಪಾಸ್ಪೋರ್ಟ್ ಅವಧಿ ಕಳೆದ ವರ್ಷವೇ ಅಂತ್ಯ ಆಗಿದ್ದು, ಅದನ್ನು ರಿನ್ಯೂವಲ್ ಮಾಡುವಂತೆ ಅಧಿಕಾರಿಗಳಿಗೆ ಸುಷ್ಮಾ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.