ನವದೆಹಲಿ: ಮುಂದಿನ ವಿಚಾರಣೆವರೆಗೂ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಸೂಚಿಸಿದ್ದು, ಇದೀಗ ಮೊದಲು ನಿಗದಿಪಡಿಸಿದಂತೆ ತಮಿಳುನಾಡಿಗೆ ಪ್ರತಿದಿನ 2000 ಕ್ಯೂಸೆಕ್ ನೀರು ಹರಿಸಬೇಕಿದೆ.
ಕಾವೇರಿ ನದಿ ನೀರು ಹಂಚಿಕೆ ನ್ಯಾಯಾಧಿಕರಣದ ತೀರ್ಪಿನ ವಿರುದ್ಧ ಉಭಯ ರಾಜ್ಯಗಳು ಮೇಲ್ಮನವಿ ಸಲ್ಲಿಸಿದ್ದು, ಪ್ರಸ್ತುತ ಪ್ರಕರಣವನ್ನು ಇಂದು ಕೈಗೆತ್ತಿಕೊಂಡ ಸುಪ್ರೀಂ ಈ ರೀತಿ ಹೇಳಿದೆ.
1980 ರ ದಶಕದಲ್ಲಿ ತಮಿಳುನಾಡು ಹಾಗೂ ಕರ್ನಾಟಕದ ಮಧ್ಯೆ ನಡೆದ ಒಪ್ಪಂದ ಸಮ್ಮತವೇ? ಪ್ರಸ್ತುತ ಅಂಕಿ ಅಂಶಗಳ ಸಮೀಕ್ಷೆಯನ್ನೂ ಪರಿಗಣಿಸುವ ಅವಶ್ಯಕತೆ ಇಲ್ಲವೇ ? ಇತ್ಯಾದಿ ಪ್ರಶ್ನೆಗಳನ್ನು ಕರ್ನಾಟಕದ ಪರ ವಕೀಲ ಫಾಲಿ ನಾರಿಮನ್ ಕೇಳಿದ್ದಾರೆ.
ಮುಂದಿನ ವಿಚಾರಣೆ ಜುಲೈ 11 ರಂದು ನಿಗದಿಪಡಿಸಿದ್ದು, ಅಲ್ಲಿಯವರೆಗೆ ಈ ಹಿಂದಿನ ನಿರ್ಣಯದಂತೆ 2000 ಕ್ಯೂಸೆಕ್ ನೀರು ಹರಿಸುವುದು ಕರ್ನಾಟಕಕ್ಕೆ ಅನಿವಾರ್ಯವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.