ಹುಬ್ಬಳ್ಳಿ: ಅಂಗನವಾಡಿ ಮಕ್ಕಳಿಗೆ ಮೊಟ್ಟೆ ನೀಡುವುದರಿಂದ ಕೆಲ ಧರ್ಮದವರಿಗೆ ಮುಜುಗುರ ಉಂಟಾಗುತ್ತದೆ ಎಂದು ಅಖಿಲ ಭಾರತೀಯ ಸಸ್ಯಹಾರಿ ಸಂಘಟನೆಗಳ ಸಮುದಾಯ ಹಾಗೂ ಧರ್ಮಗಳ ಒಕ್ಕೂಟದ ದಯಾನಂದ ಸ್ವಾಮೀಜಿ ಹೇಳಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ಈ ಕುರಿತು ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ ಮಂಡಿಸಿದ ತಮ್ಮ 12ನೇ ಬಜೆಟ್ನಲ್ಲಿ ಅಂಗನವಾಡಿ ಮಕ್ಕಳಿಗೆ ಅಪೌಷ್ಠಿಕತೆ ಹೋಗಲಾಡಿಸುವಿಕೆ ಹಿನ್ನೆಲೆಯಲ್ಲಿ ಮೊಟ್ಟೆ ವಿತರಿಸುವುದಾಗಿ ಘೋಷಿಸಿದ್ದಾರೆ. ಇದನ್ನು ಹಿಂತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.
ಸರ್ವಧರ್ಮದ ಮಕ್ಕಳೂ ಸೇವಿಸುವ ಸಸ್ಯಹಾರವನ್ನು ಮಾತ್ರ ವಿತರಿಸುವ ವ್ಯವಸ್ಥೆ ಮಾಡಬೇಕು. ಅದನ್ನು ಬಿಟ್ಟು ಈ ರೀತಿ ಕೆಲ ಧರ್ಮ, ಜಾತಿಗಳಿಗೆ ಅಪಚಾರವಾಗುವಂಥ ನಿರ್ಣಯವನ್ನು ಕೈಗೊಳ್ಳಬಾರದು ಎಂದು ಅವರು ಹೇಳಿದರು.
ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ಹೋಗಲಾಡಿಸುವಲ್ಲಿ ಶ್ರಮಿಸಬೇಕಿರುವುದು ಅಗತ್ಯವಾಗಿದೆ. ಆದರೆ ಅದು ಸರ್ವ ಸಮ್ಮತ ರೀತಿಯಲ್ಲಿರಬೇಕು. ಪೌಷ್ಠಿಕತೆ ಕೇವಲ ಮೊಟ್ಟೆಯಲ್ಲೇ ಇದೆ ಎಂದು ಹೇಳಿದವರಾರು ಎಂದು ಪ್ರಶ್ನಿಸಿದ ಸ್ವಾಮೀಜಿ, ಹುರಿದ ಶೇಂಗಾ, ಹಣ್ಣು ಹಂಪಲಗಳನ್ನು ಬೇಕಿದ್ದರೆ ಕೊಡಲು ಮುಂದಾಗಲಿ ಎಂದು ಹೇಳಿದರು.
ಈ ರೀತಿಯ ಸರ್ಕಾರದ ಘೋಷಣೆಯ ಹಿಂದೆ ಯಾವುದೋ ಒಂದು ಸಮಾಜ ಅಥವಾ ಧರ್ಮದ ಓಲೈಕೆಯ ಸಂಶಯ ಬಲವಾಗಿ ಗೋಚರಿಸುತ್ತದೆ ಎಂದು ಆರೋಪಿಸಿರುವ ಅವರು, ಮುಖ್ಯಮಂತ್ರಿಗಳು ಈ ನಿರ್ಣಯದಿಂದ ಹಿಂದೆ ಸರಿಯದಿದ್ದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.