ನವದೆಹಲಿ: ಸಾರ್ವಜನಿಕ ಸಾರಿಗೆ ಕ್ಷೇತ್ರದಲ್ಲಿ ಹೈಬ್ರಿಡ್/ ವಿದ್ಯುತ್ ಚಾಲಿತ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗ್ರೀನ್ ಅರ್ಬನ್ ಮೊಬಿಲಿಟಿ ಯೋಜನೆಯ ಮೇಲೆ ಕಾರ್ಯನಿರ್ವಹಿಸುತ್ತಿದೆ ಎಂದು ಸರ್ಕಾರ ತಿಳಿಸಿದೆ.
ಈ ಪ್ರಸ್ತಾವನೆಯ ಬಗ್ಗೆ ಮಧ್ಯಸ್ಥಗಾರರ ಅಭಿಪ್ರಾಯಗಳನ್ನು ಪಡೆದ ಬಳಿಕ ನಿರ್ಧರಿಸಲಾಗುವುದು. ಇದನ್ನು ಕೇಂದ್ರ ಸಚಿವ ಸಂಪುಟದ ಅನುಮೋದನೆ ನಂತರ ಜಾರಿಗೆ ತರಲಾಗುವುದು ಎಂದು ಕೇಂದ್ರದ ನಗರಾಭಿವೃದ್ಧಿ ರಾಜ್ಯ ಸಚಿವ ರಾವ್ ಇಂದ್ರಜಿತ್ ಸಿಂಗ್ ಹೇಳಿದಾರೆ.
ಪ್ರಸ್ತಾಪಿತ ಯೋಜನೆಯ ವೈಶಿಷ್ಟ್ಯಗಳನ್ನು ವಿವರಿಸಿದ ಅವರು, ಆರಂಭದಲ್ಲಿ 5 ಲಕ್ಷ ಜನಸಂಖ್ಯೆ ಇರುವ 103 ನಗರಗಳಲ್ಲಿ ಕಾರ್ಯರೂಪಕ್ಕೆ ತರಲಾಗಿದೆ. ನಂತರ ಇತರ ನಗರಗಳಲ್ಲಿ ಅಳವಡಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲು 70 ಸಾವಿರ ಕೋಟಿ ರೂ. ಬಂಡವಾಳ ಅಗತ್ಯವಿದೆ. ಇದರಲ್ಲಿ ಶೇ. 10ರಷ್ಟು ನಗರ ಸ್ಥಳೀಯ ಸಂಸ್ಥೆಗಳು, ಶೇ.30ರಷ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಾಗೂ ಉಳಿದ ನಿಧಿಯನ್ನು ಬಹುರಾಷ್ಟ್ರೀಯ ಏಜೆನ್ಸಿಗಳಿಂದ ಸಾಲ ಪಡೆಯಲಾಗುವುದು ಎಂದು ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ ಎಂದು ಇದ್ರಜಿತ್ ಸಿಂಗ್ ತಿಳಿಸಿದ್ದಾರೆ.
ಈ ಯೋಜನೆ ಮಾಲಿನ್ಯ ಮಟ್ಟ ತಗ್ಗಿಸಲು ಸಹಾಯಕವಾಗಲಿದೆ. ರಾಜ್ಯಗಳ ಸಾರಿಗೆ ಸಂಸ್ಥೆಗಳು ಬಸ್ಗಳಿಗೆ ಹೈಬ್ರಿಡ್ ಮತ್ತು ವಿದ್ಯುತ್ ಚಾಲಿತ ಕ್ಲೀನ್ ತಂತ್ರಜ್ಞಾನ ಬಳಸುವಂತೆ ಪ್ರಸ್ತಾಪ ಸಲ್ಲಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಸ್ತಾಪಿತ ಯೋಜನೆ ಸಾರಿಗೆ ವ್ಯವಸ್ಥೆ ಅಡಿಯಲ್ಲಿ ಕಾಲುದಾರಿ, ಸಾರ್ವಜನಿಕ ಬೈಕ್ ಹಂಚಿಕೆ, ಕ್ಷಿಪ್ರ ಬಸ್ ಪ್ರಯಾಣ ವ್ಯವಸ್ಥೆ (ಬಿಆರ್ಟಿ), ಉತ್ತಮ ಸಾರಿಗೆ ವ್ಯವಸ್ಥೆ, ನಗರ ಸರಕು ನಿರ್ವಹಣೆ ಮತ್ತು ಹಣಕಾಸು ಸಂಗ್ರಹರಣೆ ನಡೆಸಲಾಗುವುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.