ನವದೆಹಲಿ: ಅಯೋಧ್ಯಾ ರಾಮಮಂದಿರ ವಿವಾದವನ್ನು ನ್ಯಾಯಾಲಯದ ಹೊರಗಡೆ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಿ ಎಂಬ ಸುಪ್ರೀಂಕೋರ್ಟ್ ಸಲಹೆಯನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸ್ವಾಗತಿಸಿದ್ದಾರೆ.
ಎಲ್ಲಾ ರಾಜಕೀಯ ಪಕ್ಷಗಳು ನ್ಯಾಯಾಲಯದ ಹೊರಗಡೆ ಮಾತುಕತೆಯ ಮೂಲಕ ಸೌಹಾರ್ದತೆಯಿಂದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದಿರುವ ಅವರು, ಇದಕ್ಕೆ ಸರ್ಕಾರದಿಂದ ಯಾವುದೇ ಸಹಾಯ ಬೇಕಾದರು ಮಾಡಲು ಸಿದ್ಧವಿದ್ದೇವೆ ಎಂಬ ಭರವಸೆ ನೀಡಿದ್ದಾರೆ.
ರಾಮಾಯಣ ಮ್ಯೂಸಿಯಂ ನಿರ್ಮಾಣಕ್ಕೆ ಬೇಕಾದ ಭೂಮಿಯನ್ನು ವಾರಗಳೊಳಗೆ ಮಂಜೂರು ಮಾಡುವುದಾಗಿಯೂ ಅವರು ಹೇಳಿದ್ದಾರೆ.
ಅಯೋಧ್ಯಾ ವಿವಾದ ಅತೀ ಸೂಕ್ಷ್ಮವಾಗಿರುವುದರಿಂದ ಪಕ್ಷಗಳು ಒಂದೆಡೆ ಕೂತು ಸ್ನೇಹಪೂರ್ವಕವಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಇದಕ್ಕೆ ಒಬ್ಬ ಮಧ್ಯವರ್ತಿಯನ್ನೂ ನೇಮಿಸಿಕೊಳ್ಳಬೇಕು ಎಂದು ಸುಪ್ರೀಂ ಸಲಹೆ ನೀಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.