ದಾವಣಗೆರೆ: ಕುಂದಾನಗರಿ ಬೆಳಗಾವಿಯಲ್ಲಿ 2011 ರಲ್ಲಿ 2ನೇ ವಿಶ್ವ ಕನ್ನಡ ಸಮ್ಮೇಳನ ಯಶಸ್ವಿಯಾಗಿ ನಡೆದಿದ್ದು, ಇದೀಗ ದಾವಣಗೆರೆ 3 ನೇ ವಿಶ್ವ ಕನ್ನಡ ಸಮ್ಮೇಳನಕ್ಕೆ ಸಾಕ್ಷಿಯಾಗಲಿದೆ.
ಈ ಕುರಿತು ಖಚಿತ ಪಡಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಬಲವಂತರಾವ್ ಪಾಟೀಲ್, ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನವನ್ನು ನಡೆಸಲು ಸರ್ಕಾರ ಸಮ್ಮತಿಸಿರುವುದಾಗಿ ತಿಳಿಸಿದ್ದಾರೆ.
ಮೂಲ ಸೌಕರ್ಯವುಳ್ಳ ಸೂಕ್ತ ಜಾಗವನ್ನು ಗುರುತಿಸಿ, ಪ್ರಾಥಮಿಕ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿರುವ ಅವರು, ಈ ಸಮ್ಮೇಳನಕ್ಕೆ ಬಜೆಟ್ನಲ್ಲಿ 20 ಕೋಟಿ ಅನುದಾನವನ್ನು ಮೀಸಲಿರಿಸಿದೆ ಎಂದಿದ್ದಾರೆ.
ಜುಲೈ ತಿಂಗಳಲ್ಲಿ ಸಮ್ಮೇಳನ ಆಯೋಜಿಸುವ ಸಾಧ್ಯತೆ ಇದ್ದು, ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದಿರುವ ಅವರು, ಸಮ್ಮೇಳನದ ಯಶಸ್ಸಿಗೆ ಅಗತ್ಯವಾದ ಸಮಿತಿ, ಉಪ ಸಮಿತಿಗಳನ್ನು ರಚಿಸುವುದಾಗಿ ಪಾಟೀಲ್ ತಿಳಿಸಿದ್ದಾರೆ.
ಈ ಹಿಂದೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರು, 2017 ರ ಜೂನ್ನಲ್ಲಿ 3ನೇ ವಿಶ್ವ ಕನ್ನಡ ಸಮ್ಮೇಳನವನ್ನು ಬಳ್ಳಾರಿ ಅಥವಾ ದಾವಣಗೆರೆಯಲ್ಲಿ ಆಯೋಜಿಸುವುದಾಗಿ ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.