ಮುಂಬಯಿ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಾರ್ಚ್ 18ರಂದು ಬಜೆಟ್ ಮಂಡನೆ ವೇಳೆ ವಿಧಾನಸಭೆಯ ಒಳಗೆ ಹಾಗೂ ಹೊರಗೆ ಅಶಿಸ್ತು ತೋರಿದ ಕಾಂಗೆಸ್ ಮತ್ತು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ)ದ 19 ಶಾಸಕರನ್ನು ಬುಧವಾರ ಅಮಾನತು ಮಾಡಲಾಗಿದೆ.
ಬುಧವಾರ ಬೆಳಗ್ಗೆ ವಿಧಾನಸಭೆಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆದ ವಿಶೇಷ ಅಧಿವೇಶನದಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಗಿರೀಶ್ ಬಾಪಟ್ ನಿರ್ಣಯ ಕೈಗೊಂಡಿದ್ದು, ಬುಧವಾರದಿಂದ ಡಿಸೆಂಬರ್ 31, 2017ರ ತನಕ ಅಮಾನತುಗೊಳಿಸಲಾಗಿದೆ. ಧ್ವನಿ ಮತದ ಮೂಲಕ ಈ ನಿರ್ಣಯ ಕೈಗೊಳ್ಳಲಾಯಿತು.
ಕಾಂಗ್ರೆಸ್ ಶಾಸಕರು ವಿಧಾನಸಭೆ ಆವರಣದಲ್ಲಿ ಬ್ಯಾನರ್ಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದ್ದಾರೆ. ನಂತರ ಭಜನೆ ಹಾಡುವುದು, ಬಜೆಟ್ ಪ್ರತಿಗಳನ್ನು ಸುಟ್ಟು ಹಾಕಿರುವ ಆರೋಪ ಹೊತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ನಿರ್ಣಯ ಅಮಾನತುಗೊಂಡ ಸದಸ್ಯರು ವಿಧಾನಸಭೆ ಪ್ರವೇಶವನ್ನು ನಿರ್ಬಂಧಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.