ನವದೆಹಲಿ: ಭಾರತದ ಪರಮಾಣು ವಿದ್ಯುತ್ ಉತ್ಪಾದನಾ ಸಾಮರ್ಥ್ಯ 2024ರ ವೇಳೆಗೆ ಮೂರು ಪಟ್ಟು ಹೆಚ್ಚುವ ಸಾಧ್ಯತೆ ಇದ್ದು, ಸುಮಾರು 15,000 ಮೆ.ವ್ಯಾ. ತಲುಪುವ ನಿರೀಕ್ಷೆ ಇದೆ. ಕೇಂದ್ರ ಸರ್ಕಾರ ಹೊಸ ಪರಮಾಣು ವಿದ್ಯುತ್ ಸ್ಥಾವರಗಳ ಸ್ಥಾಪನೆಯ ಪ್ರಕ್ರಿಯೆ ಚುರುಕುಗೊಳಿಸಿದೆ ಎಂದು ಲೋಕಸಭೆಗೆ ಬುಧವಾರ ತಿಳಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎಲ್ಲ ಕಡೆ ಅಣು ವಿದ್ಯುತ್ ಯೋಜನೆಗಳನ್ನು ತ್ವರಿತಗೊಳಿಸಲು ಹಾಗೂ ದೇಶದ ವಿವಿಧ ಭಾಗಗಳಲ್ಲಿ ಹೊಸ ಸ್ಥಾವರಗಳನ್ನು ಸ್ಥಾಪಿಸುವ ಕಾರ್ಯ ಮಾಡುತ್ತಿದೆ ಎಂದು ಪ್ರಧಾನಿ ಸಚಿವಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.
2014ರಲ್ಲಿ ಭಾರತದ ಅಣು ವಿದ್ಯುತ್ ಉತ್ಪಾದನಾ ಸಾಮರ್ಥ್ಯ 4,780 ಮೆ.ವ್ಯಾ. ಇತ್ತು. ಕೇಂದ್ರ ಸರ್ಕಾರ 2014ರಲ್ಲಿ ಆಡಳಿತಕ್ಕೆ ಬಂದ ನಂತರ ೧೦ ವರ್ಷದಲ್ಲಿ ಅಣು ಉತ್ಪಾದನೆ ಮೂರು ಪಟ್ಟು ಹೆಚ್ಚಿಸುವ ಗುರಿ ರೂಪಸಿತ್ತು. ಆದರೆ ಇದಕ್ಕೆ ಸ್ವದೇಶಿ ಮತ್ತು ವಿದೇಶಿ ಮೂಲಗಳಿಂದ ಸಾಕಷ್ಟು ಪ್ರಮಾಣದಲ್ಲಿ ಯೂರೇನಿಯಂ ಪೂರೈಕೆಯಾಗುವುದು ಅಗತ್ಯ ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಮೊದಲ ಬಾರಿಗೆ ಭಾರತೀಯ ಪರಮಾಣು ವಿದ್ಯುತ್ ನಿಗಮಕ್ಕೆ ಸಾರ್ವಜನಿಕ ವಲಯದ ಉದ್ಯಮಗಳ ಜೊತೆ ಜಂಟಿಯಾಗಿ ಪರಮಾಣು ಸ್ಥಾವರ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.