ನವದೆಹಲಿ: ಭಾರತದ ಸರ್ಜಿಕಲ್ ಸ್ಟ್ರೈಕ್ ಬಳಿಕ ಗಡಿ ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ಥಾನದಿಂದ ಕದನ ವಿರಾಮ ಉಲ್ಲಂಘನೆ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ಗೆ ತಿಳಿಸಿದೆ.
ಸರ್ಜಿಕಲ್ ಸ್ಟ್ರೈಕ್ ಬಳಿಕ ಪಾಕ್ನಿಂದ ಕದನ ವಿರಾಮ ಕಡಿಮೆಯಾಗಿದೆ. 2016ರಲ್ಲಿ ಎಲ್ಒಸಿಯಲ್ಲಿ 228 ಹಾಗೂ ಅಂತಾರಾಷ್ಟ್ರೀಯ ಗಡಿಯಲ್ಲಿ 221 ಕದನ ವಿರಾಮ ಉಲ್ಲಂಘನೆ ನಡೆದಿವೆ. ಆದರೆ 2017ರ ಫೆಬ್ರವರಿ ವರೆಗೆ ಎಲ್ಒಸಿಯಲ್ಲಿ ಕೇವಲ 22 ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ 6 ಬಾರಿ ಕದನ ವಿರಾಮ ಉಲ್ಲಂಘನೆ ನಡೆದಿದೆ ಎಂದು ಕೇಂದ್ರದ ಗೃಹ ಖಾತೆ ರಾಜ್ಯ ಸಚಿವ ಹಂಸರಾಜ್ ಗಂಗಾರಾಮ್ ಅಹಿರ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
2017ರಲ್ಲಿ ಎಲ್ಒಸಿ ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ನಾಗರಿಕ ಸಾವು ನೊವುಗಳ ಸಂಖ್ಯೆ ಶೂನ್ಯವಾಗಿದೆ. 2016ರಲ್ಲಿ ಎಲ್ಒಸಿಯಲ್ಲಿ 13 ಮಂದಿ ಸಾವನ್ನಪ್ಪಿದ್ದು, 83 ಮಂದಿ ಗಾಯಗೊಂಡಿದ್ದರು. ಅಂತಾರಾಷ್ಟ್ರೀಯ ಗಡಿಯಲ್ಲಿ 8 ಮಂದಿ ಸಾವನ್ನಪ್ಪಿದ್ದು, 74 ಮಂದಿ ಗಾಯಗೊಂಡಿದ್ದರು. ಅಂತಾರಾಷ್ಟ್ರೀಯ ಗಡಿಯಲ್ಲಿ 5 ಬಿಎಸ್ಎಫ್ ಸೈನಿಕರು ಹುತಾತ್ಮರಾಗಿದ್ದು, 25 ಸೈನಿಕರು ಗಾಯಗೊಂಡಿದ್ದರು. ಹಾಗಾಗಿ ಸರ್ಜಿಕಲ್ ದಾಳಿ ಬಳಿಕ ಕದನ ವಿರಾಮ ಉಲ್ಲಂಘನೆ ಪ್ರಮಾಣ ಕಡಿಮೆಯಾಗಿದೆ ಎಂದು ಹಂಸರಾಜ್ ಅಹಿರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.