ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ತಮ್ಮ ಸಂಪುಟ ಸಚಿವರಿಗೆ ಬುಧವಾರ ಖಾತೆಗಳ ಹಂಚಿಕೆ ಮಾಡಿದ್ದಾರೆ. ಮಹತ್ವದ ಗೃಹಖಾತೆಯನ್ನು ಅವರು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ.
ಅಲ್ಲದೇ ಮಾಹಿತಿ, ವಸತಿ, ನಗರ ಯೋಜನೆ, ಆಹಾರ ಮತ್ತು ನಾಗರಿಕ ಪೂರೈಕೆ, ಮೈನಿಂಗ್, ವೈಯಕ್ತಿಕ, ಸಾಂಸ್ಥಿಕ ಹಣಕಾಸು, ಎಸ್ಟೇಟ್ ಮತ್ತು ಇತರ ಇಲಾಖೆಗಳ ಖಾತೆಗಳ ಜವಾಬ್ದಾರಿಯನ್ನು ಅವರು ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ.
ಮಹತ್ವದ ಹಣಕಾಸು ಖಾತೆಯನ್ನು ಯುಪಿ ಅಸೆಂಬ್ಲಿ ಮಾಜಿ ಸ್ಪೀಕರ್ ಹಾಗೂ ಆರು ಬಾರಿ ಶಾಸಕರಾಘಿರುವ ರಾಜೇಶ್ ಅಗರ್ವಾಲ್ ಅವರಿಗೆ ನೀಡಲಾಗಿದೆ. ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರಿಗೆ ಲೋಕೋಪಯೋಗಿ ಇಲಾಖೆ, ಆಹಾರ ಸಂಸ್ಕರಣೆ, ಮನೋರಂಜನಾ ತೆರಿಗೆ ಮತ್ತು ಸಾರ್ವಜನಿಕ ಉದ್ಯಮ
ಇಲಾಖೆಗಳ ಜವಾಬ್ದಾರಿಯನ್ನು ನೀಡಲಾಗಿದೆ.
ಮತ್ತೋರ್ವ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಅವರಿಗೆ ಉನ್ನತ ಹಾಗೂ ಮಾಧ್ಯಮಿಕ ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಇಲಾಖೆಗಳ ಜವಾಬ್ದಾರಿ ನೀಡಲಾಗಿದೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಸಿಎಂ ಅವರು ಖಾತೆ ಹಂಚಿಕೆಯ ಅಂತಿಮ ಪಟ್ಟಿಯನ್ನು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.