ತಿರುವನಂತಪುರಂ: ಪಂಚರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲುಕಂಡ ಹಿನ್ನಲೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಟೀಕೆ ಮಾಡಿದ್ದ ಕೇರಳದ ಯುವ ಕಾಂಗ್ರೆಸ್ ನಾಯಕ ಸಿ.ಆರ್ ಮಹೇಶ್ ಅವರು ಇದೀಗ ರಾಜೀನಾಮೆ ನೀಡಿದ್ದಾರೆ.
ಗುಂಪುಗಾರಿಕೆಯ ರಾಜಕೀಯದಿಂದ ಬೇಸತ್ತು ಹೋಗಿದ್ದೇನೆ ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.
ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಬೇರೆ ಪಕ್ಷಕ್ಕೆ ಸೇರುವ ಯಾವುದೇ ಯೋಚನೆಯೂ ಇಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ.
‘ರಾಜಕೀಯ ಬಿಡಲು ಇದು ನನಗೆ ಸುಸಮಯ. ಇದರರ್ಥ ನಾನು ಇನ್ನೊಂದು ಪಕ್ಷಕ್ಕೆ ಜಿಗಿಯಲು ನೋಡುತ್ತಿದ್ದೇನೆ ಎಂದಲ್ಲ. ನಾನು ರಾಜಕೀಯ ಗುಂಪುಗಾರಿಕೆಯಿಂದ ಬೇಸತ್ತಿದ್ದೇನೆ. ಕಳೆದ ಹಲವು ವರ್ಷಗಳಿಂದ ನಾನು ಪ್ರತಿನಿಧಿಸುತ್ತಿರುವ ಪಕ್ಷ ಬದಲಾಗುವ ಅಥವಾ ಸುಧಾರಣೆಗಳನ್ನು ತರುವ ಯಾವುದೇ ಮೂಡ್ನಲ್ಲಿ ಇಲ್ಲ’ ಎಂದಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಟೀಕೆ ನಡೆಸಿದ ತರುವಾಯ ಇವರನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಪಕ್ಷದಿಂದ ಅಮಾನತು ಮಾಡಿದ್ದರು.
ಕಾಂಗ್ರೆಸ್ನ ಮೊದಲ ಕುಟುಂಬದ ವಿರುದ್ಧ ಟೀಕೆ ಆ ಮಾಡುವವರಿಗೆ ಆ ಪಕ್ಷದಲ್ಲಿ ಉಳಿಗಾಲವಿಲ್ಲ ಎಂಬುದು ಇದರಿಂದ ಮತ್ತೊಮ್ಮೆ ಸಾಬೀತಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.