ನವದೆಹಲಿ: ಜಾತಿ, ಜನಾಂಗ, ಧರ್ಮದ ಆಧಾರದಲ್ಲಿ ಬಿಜೆಪಿ ಯಾವತ್ತೂ ತಾರತಮ್ಯ ಮಾಡುವುದಿಲ್ಲ ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಉತ್ತರಪ್ರದೇಶದಲ್ಲಿ ಕೆಲವೊಂದು ಸಮುದಾಯದ ಬಗ್ಗೆ ತಾರತಮ್ಯದ ಧೋರಣೆ ಅನುಸರಿಸಲಾಗುತ್ತಿದೆ ಮತ್ತು ರೋಮಿಯೋ ನಿಗ್ರದ ದಳದಿಂದ ನೈತಿಕ ಪೊಲೀಸ್ ಗಿರಿ ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕ ರಂಜಿತ್ ರಂಜನ್ ಲೋಕಸಭೆಯಲ್ಲಿ ಆರೋಪಿಸಿದ ಈ ಹಿನ್ನಲೆಯಲ್ಲಿ ರಾಜನಾಥ್ ಸಿಂಗ್ ಈ ಹೇಳಿಕೆ ನೀಡಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವವರನ್ನು ನಿಗ್ರಹಿಸುವ ಸಲುವಾಗಿ ರೋಮಿಯೋ ನಿಗ್ರಹ ಪಡೆ ಎಂಬ ಪೊಲೀಸ್ ಪಡೆಯನ್ನು ರಚಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಅಲ್ಲದೇ ಯಾವುದೇ ಸಮುದಾಯದ ಬಗ್ಗೆಯೂ ತಾರತಮ್ಯದ ಧೋರಣೆ ಅನುಸರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.