ಲಂಡನ್: ಯುಕೆಯ ಪಾರ್ಲಿಮೆಂಟ್ ಹೊರಭಾಗದಲ್ಲಿ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 7 ಮಂದಿಯನ್ನು ಬಂಧಿಸಲಾಗಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ವಿವಿಧ 6 ವಿಳಾಸಗಳಲ್ಲಿ ಕಾರ್ಯಾಚರಿಸಿ ಲಂಡನ್ ಮತ್ತು ಬರ್ಮಿಂಗ್ಹ್ಯಾಮ್ಗಳಲ್ಲಿ 7 ಶಂಕಿತ ಆರೋಪಿಗಳನ್ನು ಬ್ರಿಟಿಷ್ ಪೊಲೀಸರು ಬಂಧಿಸಿದ್ದಾರೆ.
ಅಲ್ಲದೇ ದಾಳಿಕೋರ ಸೇರಿದಂತೆ 4 ಮಂದಿ ಘಟನೆಯಲ್ಲಿ ಮೃತರಾಗಿದ್ದಾರೆ, 5 ಮಂದಿಯಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. 29 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದದು, ಅದರಲ್ಲಿ 9 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದಿದ್ದಾರೆ.
ದಾಳಿಕೋರರು ಒಬ್ಬಂಟಿಗರಂತೆ ನಟಿಸಿ ದಾಳಿ ಮಾಡಿದ್ದಾರೆ, ಅವರು ಅಂತಾರಾಷ್ಟ್ರೀಯ ಭಯೋತ್ಪಾದನ ಸಂಘಟನೆಗಳಿಂದ ಪ್ರೇರಿತರಾದವರು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.