ನವದೆಹಲಿ: ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ವರ್ಗಗಳಿಗೆ ರಾಷ್ಟ್ರೀಯ ಆಯೋಗವನ್ನು ರಚಿಸಿ ಅದಕ್ಕೆ ಸಾಂವಿಧಾನಿಕ ಸಂಸ್ಥೆಯ ಸ್ಥಾನ ನೀಡಲು ಕೇಂದ್ರ ಸಂಪುಟ ಸಮ್ಮತಿ ಸೂಚಿಸಿದೆ.
ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗ(ಎನ್ಸಿಬಿಎಸ್) ಬದಲಿಗೆ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಗಳಿದ ವರ್ಗಗಳ ರಾಷ್ಟ್ರೀಯ ಆಯೋಗ (ಎನ್ಎಸ್ಇಬಿಸಿ)ಯನ್ನು ತರಲು ಉದ್ದೇಶಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಬುಧವಾರ ನಡೆಸಿದ್ದ ಸಂಪುಟ ಸಭೆಯಲ್ಲಿ ಹೊಸ ಆಯೋಗ ರಚಿಸಲು ಸಂವಿಧಾನಕ್ಕೆ ತಿದ್ದುಪಡಿ ಮತ್ತು ಕಲಂ 338ಬಿಯ ಸೇರ್ಪಡೆಗೆ ಅನುಮೋದನೆ ನೀಡಿದ್ದರು.
ಈ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ಮಸೂದೆ ಸಂಸತ್ತಿನಲ್ಲಿ ಮಂಡನೆಯಾಗಲಿದೆ.
ಈ ಆಯೋಗದಲ್ಲಿ ಮುಖ್ಯಸ್ಥ, ಉಪ ಮುಖ್ಯಸ್ಥ ಮತ್ತು ಇತರ 3 ಸದಸ್ಯರಿರಲಿದ್ದಾರೆ.
ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗಕ್ಕೆ ಸಾಂವಿಧಾನಿಕ ಸ್ಥಾನ ನೀಡಬೇಕು ಎಂಬ ಬೇಡಿಕೆಗಳ ಮೇರೆಗೆ ಕೇಂದ್ರ ಈ ನಿರ್ಧಾರ ತೆಗೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.