ನವದೆಹಲಿ: ಬಿಹಾರದ ಬಿಜೆಪಿ ಮುಖಂಡರಾಗಿರುವ ಹುಕುಂದೇವ್ ನರೇನ್ ಯಾದವ್ ಅವರು ಭಾರತದ ಮುಂದಿನ ಉಪರಾಷ್ಟ್ರಪತಿಗಳಾಗಿ ನೇಮಕಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಉನ್ನತ ನಾಯಕರು ಮತ್ತು ಎನ್ಡಿಎ ಮೈತ್ರಿಕೂಟ ಸದಸ್ಯರುಗಳು ನರೇನ್ ಅವರ ನೇಮಕಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.
75 ವರ್ಷದ ನರೇನ್ ಅವರು ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದು, ಬಿಹಾರದಿಂದ 5 ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಸಂಸತ್ತಿನಲ್ಲಿ ಕಟುವಾದ ಭಾಷಣಗಳಿಗೆ ಇವರು ಹೆಸರಾಗಿದ್ದರು.
ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರ ಅವಧಿ ಜುಲೈಗೆ ಅಂತ್ಯಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.