ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳ ಆಸ್ಪತ್ರೆಗಳಲ್ಲಿ ’ಜನ ಸಂಜೀವಿನಿ’ ಹೆಸರಿನಡಿ ಜನರಿಕ್ ಔಷಧಿಗಳ ಮಳಿಗೆಗಳನ್ನು ತೆರೆಯುವುದಾಗಿ ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಅವರು ನಗರದ ಕೆ.ಸಿ.ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ’ಜೂ.1ರಿಂದ ಕೆ.ಸಿ.ಜನರಲ್ ಆಸ್ಪತೆಯಲ್ಲಿ ಮೊದಲ ಜನರಿಕ್ ಔಷಧ ಮಳಿಗೆ ತೆರೆಯಲಾಗುವುದು. ಈ ಯೋಜನೆ ಜಿಲ್ಲಾ ಕೇಂದ್ರಗಳಲ್ಲಿ ಯಶಸ್ಸು ಕಂಡಲ್ಲಿ ತಾಲೂಕು ಕೇಂದ್ರಗಳಲ್ಲೂ ತೆರೆಯಲಾಗುವುದು’ ಎಂದರು.
ಜನರಿಕ್ ಮಳಿಗೆಗಳಲ್ಲಿ ಶೇ. 60-70ರಷ್ಟು ರಿಯಾಯಿತಿ ದರದಲ್ಲಿ ಔಷಧ ಲಭ್ಯವಾಗಲಿದ್ದು, ಇದರ ಜತೆಗೆ ಬ್ರ್ಯಾಂಡೆಡ್ ಔಷಧಗಳು ಶೇ. 10ರಷ್ಟು ರಿಯಾಯಿತಿ ದರದಲ್ಲಿ ದೊರೆಯಲಿವೆ ಎಂದರು.
ಅಲ್ಲದೇ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಎಂಆರ್ಐ, ಸಿಟಿ ಸ್ಕ್ಯಾನ್, ಅಂಗಾಂಗ ಜೋಡಣೆ ಸೇರಿದಂತೆ ಅಗತ್ಯ ಆರೋಗ್ಯ ಸೇವೆ ಕಲ್ಪಿಸುವ ಯೋಜನೆ ಹೊಂದಿದ್ದು, ಇದರಿಂದ ರೋಗಿಗಳಿಗೆ ಅತೀ ಕಡಿಮೆ ದರದಲ್ಲಿ ಆರೋಗ್ಯ ಸೇವೆ ಒದಗಿಸಲಾಗುವುದು ಎಂದು ತಿಳಿಸಿದರು.
ನೇಪಾಳ ಸಂತ್ರಸ್ತರ ನೆರವಿಗಾಗಿ ರಾಜ್ಯದಿಂದ ತೆರಳಿದ್ದ ೧೩ ಮಂದಿ ವೈದ್ಯರ ತಂಡವನ್ನು ಈ ಸಂದರ್ಭದಲ್ಲಿ ಸಚಿವರು ಸನ್ಮಾನಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.