ಮಂಗಳೂರು : ಕರ್ನಾಟಕದಲ್ಲಿ ಕಸ್ತೂರಿ ರಂಗನ್ ವರದಿ ಜಾರಿಯ ಅಧಿಸೂಚನೆಯನ್ನು ಹಿಂಪಡೆಯಬೇಕೆಂದು ಲೋಕಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ಸರಕಾರವನ್ನು ಒತ್ತಾಯಿಸಿದರು.
ಕರ್ನಾಟಕದ ಜನತೆ ವರದಿಯ ಪರಿಸರ ಸೂಕ್ಷ್ಮ ವಲಯ ಅಧಿಸೂಚನೆಯನ್ನು ವಿರೋಧಿಸುತ್ತಿದ್ದಾರೆ. ರಾಜ್ಯ ಸರಕಾರವೂ ಕೂಡ ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿದೆ. ಅಧಿಸೂಚನೆ ಪ್ರಕಾರ 10 ಜಿಲ್ಲೆಗಳ 1,576 ಗ್ರಾಮಗಳೂ ಸೇರಿದಂತೆ 20,668 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಪ್ರದೇಶದ ವ್ಯಾಪ್ತಿ ಹೊಂದಿದೆ. ಈ ಅಧಿಸೂಚನೆ ಜಾರಿಗೊಳಿಸಿದರೆ, ಈ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕೈಕೊಳ್ಳುವಂತಿಲ್ಲ. ಈ ವಲಯದ ವ್ಯಾಪ್ತಿಯ ಗ್ರಾಮಗಳಲ್ಲಿ ಶಾಲೆ, ಆಸ್ಪತ್ರೆ ಮತ್ತು ರಸ್ತೆಗಳ ನಿರ್ಮಾಣ ನಿಷೇದಿಸಲ್ಪಡುತ್ತದೆ. ಭೂಮಂಜೂರಾತಿ ಪ್ರದೇಶದಲ್ಲಿ ಕೃಷಿ ಚಟುವಟಿಕೆ ನಡೆಸುವಂತಿಲ್ಲ. ಇದರಿಂದ ಸದ್ಯ ಅಸ್ತಿತ್ವದಲ್ಲಿರುವ ಸಸ್ಯಕಾಶಿಯ ಮೇಲೆ ಮತ್ತು ಕಾಫಿ ಮತ್ತು ಟೀ ತೋಟಗಳ ಮೇಲೂ ಪರಿಣಾಮ ಬೀರುವುದರಿಂದ ಪ್ರಮುಖವಾಗಿ ಆರ್ಥಿಕ ಬೆಳವಣಿಗೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಆದ್ದರಿಂದ ಈ ವರದಿ ಜಾರಿಗೊಳಿಸದೇ ಹಿಂಪಡೆಯಬೇಕೆಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸರಕಾರಕ್ಕೆ ಆಗ್ರಹಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.