ನವದೆಹಲಿ: ಸಾಮಾಜಿಕ ಕಾರ್ಯಕರ್ತ ಹಾಗೂ ಮಾಧ್ಯಮ ದಿಗ್ಗಜ ಡಾ.ಸುಭಾಷ್ ಚಂದ್ರ ಅವರು ತಮ್ಮ ಸಂಪೂರ್ಣ ಸಂಸತ್ ವೇತನವನ್ನು ಪ್ರಧಾನಮಂತ್ರಿ ಪರಿಹಾರ ನಿಧಿಗೆ ನೀಡಿದ್ದಾರೆ.
ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಅವರು ಚೆಕ್ನ್ನು ಹಸ್ತಾಂತರ ಮಾಡಿದರು.
ಹರಿಯಾಣದ ರಾಜ್ಯಸಭಾ ಸಂಸದನಾಗಿರುವ ಇವರು, ಭವಿಷ್ಯದಲ್ಲಿ 1 ರೂಪಾಯಿ ಸಂಸತ್ ವೇತನವನ್ನು ಪಡೆದು ಉಳಿದೆಲ್ಲಾ ಹಣವನ್ನು ಪ್ರಧಾನಮಂತ್ರಿ ಪರಿಹಾರ ನಿಧಿಗೆ ನೀಡುವುದಾಗಿ ಹೇಳಿದ್ದಾರೆ.
ಶ್ರೀಮಂತ ಭಾರತೀಯರಲ್ಲಿ ಒರ್ವರಾದ ಇವರು ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.