ಲಖ್ನೋ : ಹಿಂದುಗಳ ಪವಿತ್ರ ಸ್ಥಳ ಕೈಲಾಸ, ಮಾನಸಸರೋವರಗಳಿಗೆ ಯಾತ್ರೆ ಕೈಗೊಳ್ಳುವವರಿಗೆ ಇದ್ದ 50,000 ರೂ. ಹಣಕಾಸು ನೆರವನ್ನು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ರೂ. 1 ಲಕ್ಷಕ್ಕೆ ಏರಿಸಿದ್ದಾರೆ.
ಅಧಿಕಾರದ ಗದ್ದುಗೆ ಏರಿದ ಬಳಿಕ ಮೊದಲ ಬಾರಿಗೆ ಶನಿವಾರ ಗೋರಖ್ಪುರಕ್ಕೆ ಭೇಟಿ ನೀಡಿದ ಅವರು ಲಖ್ನೋ, ಘಾಜಿಯಾಬಾದ್ ಅಥವಾ ನೋಯ್ಡಾದಲ್ಲಿ ಕೈಲಾಸ ಮಾನಸ ಭವನವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.
ಗೋರಖ್ಪುರದಲ್ಲಿ ಸಭೆಯನ್ನು ನಡೆಸಿ ಮಾತನಾಡಿದ ಅವರು ಈ ಹಣಕಾಸಿನ ನೆರವು ಹೆಚ್ಚಳದಿಂದ ಕೈಲಾಸ ಮಾನಸ ಸರೋವರಗಳಿಗೆ ಯಾತ್ರೆ ಕೈಗೊಳ್ಳುವವರಿಗೆ ಹೆಚ್ಚಿನ ಉತ್ತೇಜನ ನೀಡಿದಂತೆ ಆಗುತ್ತದೆ ಎಂದಿದ್ದಾರೆ.
ಕೈಲಾಸ, ಮಾನಸ ಸರೋವರ ಯಾತ್ರೆ ಕೈಗೊಳ್ಳಲು 2.5 ಲಕ್ಷ ರೂ. ಗಳಷ್ಟು ವೆಚ್ಚ ತಗಲುತ್ತದೆ. ಇದನ್ನು ಭರಿಸಲು ಸಾಮಾನ್ಯ ವ್ಯಕ್ತಿಗೆ ಸಾಧ್ಯವಾಗುವುದಿಲ್ಲ. ಹೀಗಾಗಿ ಸರ್ಕಾರ ಹಣಕಾಸಿನ ನೆರವನ್ನು ಘೋಷಿಸಿದೆ.
ಈ ಸ್ಥಳಗಳಿಗೆ ಯಾತ್ರೆ ಕೈಗೊಳ್ಳಲು ಆರೋಗ್ಯವಾಗಿರುವವರಿಗೆ 1 ಲಕ್ಷ ರೂ. ನೀಡುವುದಾಗಿ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.