ಲಕ್ನೋ: ಅಕ್ರಮ ಕಸಾಯಿಖಾನೆಗಳನ್ನು ಮುಚ್ಚುತ್ತಿರುವ ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರದ ವಿರುದ್ಧ ಮಾಂಸ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ.
ಮೀನು ಮಾರಾಟಗಾರರು ಕೂಡ ಮಾಂಸ ವ್ಯವಾರಿಗಳ ಮುಷ್ಕರಕ್ಕೆ ಕೈಜೋಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಯುಪಿಯ ಬಹುತೇಕ ಮಾಂಸಹಾರ ಹೋಟೆಲ್, ಅಂಗಡಿಗಳು ವೆಜ್ನ್ನು ಸವ್ ಮಾಡುತ್ತಿವೆ.
ಕಸಾಯಿಖಾನೆಗಳ ವಿರುದ್ಧದ ಸಮರವನ್ನು ಸರ್ಕಾರ ನಿಲ್ಲಿಸುವರೆಗೆ ಮುಷ್ಕರವನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಈ ಮುಷ್ಕರಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಯೋಗಿ ಆದಿತ್ಯನಾಥ, ಕೇವಲ ಅಕ್ರಮ ಕಸಾಯಿಖಾನೆಗಳನ್ನು ಬಂದ್ ಮಾಡಲಾಗುತ್ತಿದೆ, ಚಿಕನ್, ಎಗ್, ಫಿಶ್ ಅಂಗಡಿಗಳನ್ನು ಅಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.