ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಮಗನೆಂದು ಘೋಷಿಸಿಕೊಂಡಿದ್ದ ವ್ಯಕ್ತಿಯನ್ನು ಬಂಧಿಸುವಂತೆ ಮದ್ರಾಸ್ ಹೈಕೋರ್ಟ್ ಸೋಮವಾರ ಆದೇಶಿಸಿದೆ.
ಜೆ.ಕೃಷ್ಣಮೂರ್ತಿ ಎಂಬಾತ ತಾನು ಜಯಲಲಿತಾ ಮತ್ತು ತೆಲುಗು ನಟ ಶೋಭನ್ ಬಾಬು ಅವರ ಮಗನಾಗಿದ್ದೇನೆ ಎಂದು ಘೋಷಿಸಿದ್ದ. ಈ ಬಗ್ಗೆ ಕೆಲವೊಂದು ದಾಖಲೆಗಳನ್ನು ನೀಡಿದ್ದ. ಅಲ್ಲದೇ ಈ ಬಗ್ಗೆ ಅಧಿಕೃತ ಘೋಷಣೆ ಹೊರಡಿಸಬೇಕು ಮತ್ತು ಅವರ ಆಸ್ತಿಯ ಹಕ್ಕುದಾರ ನಾನೆಂದು ಎಂದು ಹೇಳಿ ಕೋರ್ಟ್ ಮೆಟ್ಟಿಲೇರಿದ್ದ
ಇದೀಗ ಆ ದಾಖಲೆಗಳೆಲ್ಲ ನಕಲಿ ಎಂದು ಕೋರ್ಟ್ ಪತ್ತೆ ಮಾಡಿದೆ. ಕೋರ್ಟ್ ಸಮಯವನ್ನು ವ್ಯರ್ಥ ಮಾಡಿದ ಹಾಗೂ ಸುಳ್ಳು ದಾಖಲೆ ಸೃಷ್ಟಿಸಿದ್ದ ಈ ನಕಲಿ ಮಗನ ಬಂಧಿಸುವಂತೆ ಪೊಲೀಸರಿಗೆ ಆದೇಶಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.