ಹುಬ್ಬಳ್ಳಿ: ಡಬ್ಬಿಂಗ್ಗೆ ನನ್ನ ಬೆಂಬಲವಿಲ್ಲ, ರಾಜ್ಯದಲ್ಲಿ ಡಬ್ಬಿಂಗ್ಗೆ ಅವಕಾಶ ನೀಡುವುದು ಸೂಕ್ತವಲ್ಲ ಎಂದು ಹ್ಯಾಟ್ರಿಕ್ ಹೀರೊ ಶಿವರಾಜ್ಕುಮಾರ್ ಹೇಳಿದರು.
ಅವರು ನಗರದ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕನ್ನಡ ಚಿತ್ರರಂಗದಿಂದ ಅತ್ಯುತ್ತಮ ಹಾಗೂ ವಿಭಿನ್ನ ಪ್ರಯೋಗಗಳುಳ್ಳ ಚಿತ್ರಗಳು ತೆರೆಗೆ ಬರುತ್ತಿವೆ ಎಂದರು.
ಪರಭಾಷಾ ಚಿತ್ರಗಳನ್ನು ಡಬ್ ಮಾಡಿದಾಗಲೇ ಪ್ರೇಕ್ಷಕರು ಪ್ರೋತ್ಸಾಹಿಸುತ್ತಾರೆಂದರೆ ತಪ್ಪು, ಉತ್ತಮ ಗುಣಮಟ್ಟ ಹೊಂದಿದ್ದರೆ ಖಂಡಿತಾ ಕನ್ನಡ ಚಿತ್ರಗಳನ್ನು ಅಭಿಮಾನಿಗಳು ಪ್ರೋತ್ಸಾಹಿಸುತ್ತಾರೆ ಎಂದು ಅಭಿಪ್ರಾಯಪಟ್ಟರು.
‘ಸನ್ ಆಫ್ ಬಂಗಾರದ ಮನುಷ್ಯ’ ಚಿತ್ರೀಕರಣಕ್ಕೆ ಹುಬ್ಬಳ್ಳಿಗೆ ಬಂದಿರುವೆ ಎಂದರು. ಅಪ್ಪಾಜಿಯವರ ಕಾಲದಿಂದಲೂ ಶ್ರೀ ಸಿದ್ಧಾರೂಢ ಅಜ್ಜನ ಮಠಕ್ಕೆ ಬರುತ್ತಿದ್ದೇವೆ. ಅವರ ಆಶೀರ್ವಾದ ಪಡೆಯಲು ಇಲ್ಲಿಗೆ ಬಂದಿದ್ದೇನೆ ಎಂದು ಶಿವಣ್ಣ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.