ಜೈಪುರ: ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ನಡೆಯುವ GATE (Graduate Aptitude Test in Engineering ) 2017 ಪರೀಕ್ಷೆಯ ಫಲಿತಾಂಶ ಭಾನುವಾರ ಪ್ರಕಟಗೊಂಡಿದ್ದು, ಈ ಬಾರಿ ಜೈಪುರ ಮೂಲದ ವಿದ್ಯಾರ್ಥಿ ದೇಶಕ್ಕೆ ಪ್ರಥಮ ಬಂದಿದ್ದಾನೆ.
ಜೈಪುರದ ಮಾಳವಿಯಾ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅಂತಿಮ ವರ್ಷದ ಬಿಟೆಕ್ ವ್ಯಾಸಂಗ ಮಾಡುತ್ತಿರುವ ಹರ್ಷ್ ಗುಪ್ತಾ ಗೇಟ್ ಪರೀಕ್ಷೆಯ ಒಟ್ಟು ಅಂಕ 1,000ದಲ್ಲಿ 999 ಅಂಕಗಳನ್ನು ಪಡೆದುಕೊಂಡಿದ್ದಾನೆ. ಈ ಮೂಲಕ ಕೆಮಿಕಲ್ ಎಂಜಿನಿಯರಿಂಗ್ನಲ್ಲಿ ದೇಶಕ್ಕೆ ಪ್ರಥಮ ರ್ಯಾಂಕ್ ಪಡೆದುಕೊಂಡಿದ್ದಾನೆ.
ಗೇಟ್ನ್ನು ಅತ್ಯಧಿಕ ಅಂಕಗಳಿಂದ ಪಾಸ್ ಮಾಡಿಕೊಂಡಿರುವ ಈತ ಇನ್ನೂ ಹೆಚ್ಚಿನ ವ್ಯಾಸಂಗ ಮಾಡಬೇಕೋ ಅಥವಾ ಉದ್ಯೋಗಕ್ಕೆ ಸೇರಬೇಕೋ ಎಂಬ ಬಗ್ಗೆ ಗೊಂದಲದಲ್ಲಿದ್ದಾನೆ. ಹೀಗಾಗೀ ತನ್ನ ಶಿಕ್ಷಕರನ್ನು ಸಂಪರ್ಕಿಸಿ ಅವರ ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದಾನೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.