ನವದೆಹಲಿ: ಪ್ರಸ್ತುತ ಸನ್ನಿವೇಶದಲ್ಲಿ ಲೋಕಪಾಲರನ್ನು ನೇಮಕಗೊಳಿಸುವುದು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂಕೋರ್ಟ್ಗೆ ತಿಳಿಸಿದೆ. ಈ ಹಿನ್ನಲೆಯಲ್ಲಿ ಸುಪ್ರೀಂ ಲೋಕಪಾಲರ ನೇಮಕವನ್ನು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ವಿಚಾರಣೆಯ ಆದೇಶವನ್ನು ತಡೆ ಹಿಡಿದಿದೆ.
2013ರ ಲೋಕಪಾಲ ಕಾಯ್ದೆಯಂತೆ ಲೋಕಪಾಲರನ್ನು ನೇಮಕಗೊಳಿಸಬೇಕು ಎಂದು ಕೋರಿ ಕಾಮನ್ ಕಾಝ್ ಎಂಬ ಎನ್ಜಿಓ ಸುಪ್ರೀಂಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಕೆ ಮಾಡಿತ್ತು. ಈ ಎನ್ಜಿಓ ಪರವಾಗಿ ಪ್ರಶಾಂತ್ ಭೂಷಣ್ ವಾದ ಮಂಡಿಸಿದ್ದರು.
ಸರ್ಕಾರದ ಅಭಿಪ್ರಾಯವನ್ನು ಸುಪ್ರೀಂ ಮುಂದೆ ಮಂಡಿಸಿದ್ದ ಆಟಾರ್ನಿ ಜನರಲ್ ಮುಕುಲ್ ರೋಹ್ಟಗಿ, ಲೋಕಪಾಲ ಮಸೂದೆ ಸಂಸತ್ತಿನ ಮುಂದೆ ಇದ್ದು, ಮಾರ್ಚ್ನಲ್ಲಿ ಇದನ್ನು ಕೈಗೆತ್ತಿಕೊಳ್ಳುತ್ತೇವೆ ಎಂದಿದ್ದರು.
ಪ್ರಸ್ತುತ ಸನ್ನಿವೇಶದಲ್ಲಿ ರಾಜ್ಯಪಾಲರನ್ನು ನೇಮಿಸುವುದು ಸಾಧ್ಯವಿಲ್ಲ ಎಂದು ಕೇಂದ್ರ ಇದೀಗ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.