ಕೊಲ್ಕತ್ತಾ: ಇಲ್ಲಿನ ಪ್ರತಿಷ್ಠಿತ ಐಐಎಂ(ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್)ನ 100ಕ್ಕೂ ಪ್ರೊಫೆಸರ್ಸ್, ಸಿಬ್ಬಂದಿ ಹಾಗೂ ಇತರರು ಅಧಿಕೃತವಾಗಿ ಬಿಜೆಪಿಗೆ ಸೇರಿದ್ದು, ಇದೀಗ ಪ.ಬಂಗಾಲದಲ್ಲಿಯೂ ಕಮಲದತ್ತ ಒಲವು ಹೆಚ್ಚುತ್ತಿದೆ.
ಶುದ್ಧ ಹಾಗೂ ಅಭಿವೃದ್ಧಿಯ ಧ್ಯೇಯವನ್ನಿಟ್ಟುಕೊಂಡಿರುವ ರಾಜಕೀಯ ಪಕ್ಷವೆಂದರೆ ಅದು ಬಿಜೆಪಿ. ಉಳಿದ ಪಕ್ಷಗಳು ಭ್ರಷ್ಟಾಚಾರದ ಆರೋಪ ಎದುರಿಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನೇತೃತ್ವದಲ್ಲಿ ದೇಶ ಸಾಕಷ್ಟು ಎತ್ತರಕ್ಕೆ ಏರಲಿದೆ ಎಂದು ಬಿಜೆಪಿ ಸೇರಿದ ಪ್ರೊ. ಪ್ರಶಾಂತ್ ಮಿಶ್ರಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ದಿಲೀಪ್ ಘೋಷ್, ಐಐಎಂ ಅಷ್ಟೇ ಅಲ್ಲದೇ ಇನ್ನೂ ಅನೇಕ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿ, ಬೋಧಕರು ಬಿಜೆಪಿಗೆ ಸೇರಲಿದ್ದಾರೆ. ಇದು ಕೇವಲ ಆರಂಭವಷ್ಟೇ ಎಂದಿದ್ದಾರೆ.
ತೃಣಮೂಲ ಕಾಂಗ್ರೆಸ್ನ ಹಿಂದೂ ವಿರೋಧಿ ಆಡಳಿತ. ಆರ್ಎಸ್ಎಸ್ ಶಾಲೆಗಳನ್ನೇ ಟಾರ್ಗೆಟ್ ಮಾಡಿದ್ದು, ಸರಸ್ವತಿ, ಲಕ್ಷ್ಮೀ ಪೂಜೆಗೆ ಸಂಚಕಾರ ತಂದಿದ್ದ ಇತ್ಯಾದಿ ಕ್ರಮಗಳಿಂದ ಜನ ಬೇಸತ್ತಿದ್ದಾರೆ ಎಂದು ಘೋಷ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.