ಬೆಂಗಳೂರು: ಕಾಂಗ್ರೆಸ್ ಪಕ್ಷವು ಕೇಂದ್ರ ಸರಕಾರದ ಹೊಸ ಭೂಸ್ವಾಧೀನ ತಿದ್ದುಪಡಿ ವಿಧೇಯಕವನ್ನು ವಿರೋಧಿಸುತ್ತಿರುವ ಹಿನ್ನೆಲೆಯಲ್ಲಿ ಅದರ ಜಾರಿ ವಿಳಂಬವಾಗುತ್ತಿದೆ. ಇದರಿಂದಾಗಿ ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ಎತ್ತಿನಹೊಳೆ ಯೋಜನೆ ಅನುಷ್ಠಾನ ಇನ್ನಷ್ಟು ವಿಳಂಬವಾಗಲಿದೆ.
ಭೂಸ್ವಾಧೀನ ಮಸೂದೆಯ ಬಗ್ಗೆ ರಾಜ್ಯ ಸರಕಾರದ ನಿಲುವಿನಲ್ಲೂ ಯಾವುದೇ ಬದಲಾವಣೆ ಇಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಲೋಕಸಭೆಯಲ್ಲಿ ಈ ವಿಧೇಯಕಕ್ಕೆ ಒಪ್ಪಿಗೆ ದೊರೆತರೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿಲ್ಲ.
ಹೊಸ ವಿಧೇಯಕದಂತೆ ಕುಡಿಯುವ ನೀರಿನ ಯೋಜನೆಗಳಿಗೆ ಭೂಸ್ವಾಧೀನ ಪಡಿಸಿಕೊಳ್ಳುವ ಮುನ್ನ ಸಾಮಾಜಿಕ ಪರಿಣಾಮಗಳ ಅಧ್ಯಯನಕ್ಕೆ ವಿನಾಯಿತಿ ಇದ್ದು, ಎತ್ತಿನಹೊಳೆಗೂ ವಿನಾಯಿತಿ ಕೋರಿ ಕರ್ನಾಟಕ ನೀರಾವರಿ ನಿಗಮ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿತ್ತು. ಆದರೆ ಸರಕಾರ ಈ ಪ್ರಸ್ತಾವವನ್ನು ಮುಂದೂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.