ಲಖನೌ: ವರದಕ್ಷಿಣೆ ಕಿರುಕುಳ ಇದೆ ಎಂದು ಆರೋಪಿಸಿರುವ ಮಹಿಳೆಯೊಬ್ಬರು, ನೇರವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಬಳಿ ಹೇಳಿಕೊಂಡಿದ್ದು, ಯೋಗಿ ತ್ವರಿತವಾಗಿ ಸ್ಪಂದಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಾರ್ವಜನಿಕ ಸಭೆಗೆ ಬಂದಿದ್ದ, ರಿತು ಗುಪ್ತಾ ಎಂಬ ಮಹಿಳೆಯೇ ತಮ್ಮ ಸಮಸ್ಯೆಯನ್ನು ಹೇಳಿಕೊಂಡು ನೆರವು ನೀಡುವಂತೆ ಕೋರಿದವರು.
ಪತಿಯ ಮನೆಯಲ್ಲಿ ವರದಕ್ಷಿಣೆ ನೀಡುವಂತೆ ಕಿರುಕುಳ ನೀಡುತ್ತಾರೆ. ಈ ಕುರಿತು ಪೊಲೀಸರಿಗೆ ದೂರು ನೀಡಲು ಪ್ರಯತ್ನಿಸಿದರೆ ಉಪಯೋಗವೇ ಆಗುತ್ತಿಲ್ಲ ಎಂದು ರಿತು ಹೇಳಿದ್ದಾರೆ.
ಮಹಿಳೆಯ ದೂರಿಗೆ ತಕ್ಷಣವೇ ಸ್ಪಂದಿಸಿದ ಯೋಗಿ ಆದಿತ್ಯನಾಥ್ ಪೊಲೀಸ್ ಅಧಿಕಾರಿಗಳಿಗೆ ಈ ಕುರಿತು ಕ್ರಮಕೈಗೊಳ್ಳುವಂತೆ ಆದೇಶಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.